BlogEntertainmentFashionHighlightsHuman storiesLifestyleLocal newsOthersPoliticsState newsTop StoriesTrending

ಚಿಕ್ಕಮಗಳೂರು:  ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲಿ ಸಂಘಟನೆಯ ಬಲವರ್ಧನೆಗೆ ಕಾರ್ಯಯೋಜನೆ 

Aware others:

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಜಿಲ್ಲಾ ಯುವ ಕಾಂಗ್ರೆಸ್ ನ ಕಾರ್ಯಕಾರಿಣಿ ಸಭೆಯು ಜೂನ್ 26ರಂದು ಕಾಪಿನಾಡಾ ಜಿಲ್ಲಾ ಕಚೇರಿಯಲ್ಲಿ ನಡೆಯಿತು. ಕಾಂಗ್ರೆಸ್ ಪಕ್ಷದ  ಯುವ ನಾಯಕರನ್ನು ತಳಮಟ್ಟದಿಂದ ಬೆಳೆಸಲು ಕೈಗೊಳ್ಳಬೇಕಾದ ಕಾರ್ಯತಂತ್ರಗಳು, ಪಕ್ಷ ಸಂಘಟನೆಗೆ ಕೈಗೊಳ್ಳಬೇಕಾದ ಯೋಜನೆಗಳು, ಪಕ್ಷದೊಳಗಿನ ಆಂತರಿಕ ಶಿಸ್ತು ಪಾಲನೆ, ಬೂತ್ ಮಟ್ಟದಲ್ಲಿ ಕಾರ್ಯಕರ್ತರನ್ನು ಸಂಘಟಿಸುವುದು ಹೀಗೇ ಹಲವು ಗಮನಾರ್ಹ ವಿಚಾರಗಳ ಬಗ್ಗೆ ಚರ್ಚೆ ನಡೆಯಿತು.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಗೌಡ, ಪ್ರದಾನ ಕಾರ್ಯದರ್ಶಿ ಹಾಗೂ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಅಜಿತ್ ಶೆಟ್ಟಿ ವಡ್ಡರ್ಸೆ, ರಾಜ್ಯ ಉಸ್ತುವಾರಿ ನಿಗಮ್ ಭಂಡಾರಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಮಂಜುನಾಥ ಭಂಡಾರಿ, ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಅಂಶುಮಂತ್,  ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ದೀಪಿಕಾ ರೆಡ್ಡಿ, ರಾಜ್ಯ ಯುವ ಕಾಂಗ್ರೆಸ್  ಕಾರ್ಯದರ್ಶಿ ಶ್ರೀಪ್ರಸಾದ್ ಪಾಣಾಜೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ಗೌಡ  ಮೊದಲಾದವರು ವೇದಿಕೆಯಲ್ಲಿದ್ದರು.

ಜಿಲ್ಲಾ ವ್ಯಾಪ್ತಿಯ ಎಲ್ಲಾ ವಿಧಾನಸಭಾ ಕ್ಷೇತ್ರ, ಬ್ಲಾಕ್ ಮಟ್ಟದ ಅಧ್ಯಕ್ಷರು ಹಾಗೂ ನೂರಾರು ಯುವ ಕಾರ್ಯಕರ್ತರು ಉತ್ಸಾಹದಿಂದ ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಮುನ್ನ ನೂರಾರು ಕಾರುಗಳ ಮೆರವಣಿಗೆ ಮೂಲಕ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡರನ್ನು ಸ್ವಾಗತಿಸಲಾಯಿತು.


Aware others:

Leave a Reply

Your email address will not be published. Required fields are marked *

error: Content is protected !!