ಬ್ರಹ್ಮಾವರ|ಕುಮ್ರಗೊಡು: ಖಾಸಗಿ ಬಸ್ ಡಿಕ್ಕಿ –ಸ್ಕೂಟರ್ ಸವಾರ ಗಂಭೀರ!
ಬ್ರಹ್ಮಾವರ: ಖಾಸಗಿ ಬಸ್ಸೊಂದು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಬ್ರಹ್ಮಾವರ ಸಮೀಪದ ಮಾಬುಕಳ ಸೇತುವೆ ಪಕ್ಕದ ಕುಮ್ರಗೋಡುನಲ್ಲಿ ಸಂಭವಿಸಿದೆ. ಸಾಸ್ತಾನ ಪಾಂಡೇಶ್ವರ ನಿವಾಸಿ ಬಸವ ತಿಂಗಳಾಯ ಎಂದು ಗುರುತಿಸಲಾಗಿದೆ.

ಸ್ಕೂಟರ್ ನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಓವರ್ಟೇಕ್ ಮಾಡುವ ಭರದಲ್ಲಿ ಖಾಸಗೀ ಬಸ್ ಸ್ಕೂಟರಿಗೆ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಅಪಘಾತದ ಪರಿಣಾಮ ಸ್ಕೂಟರ್ ಸವಾರ ಹಾಗೂ ಹಿಂಬದಿ ಸವಾರೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಗೊಂಡವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬ್ರಹ್ಮಾವರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದಾರೆ.