ಹೆದ್ದಾರಿ ಬದಿಗೆ ಡಿಕ್ಕಿ ಹೊಡೆದ ಬುಲೆಟ್ : ಒಬ್ಬ ಗಂಭೀರ ಮತ್ತೊಬ್ಬಗೆ ಗಾಯ

ಕುಂದಾಪುರ: ಇಬ್ಬರು ಪ್ರಯಾಣಿಸುತ್ತಿದ್ದ ಬುಲೆಟ್ ಬೈಕೊಂದು ಅತೀ ವೇಗದಲ್ಲಿ ಹೆಮ್ಮಾಡಿ ಗ್ರಾಮದ ಕನ್ನಡಕುದ್ರು ಬಸ್ ನಿಲ್ದಾಣದಿಂದ ಸ್ವಲ್ಪ ಹಿಂದಕ್ಕೆ ರಸ್ತೆಯ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಹೆದ್ದಾರಿ ಪಕ್ಕದ ಕಟ್ಟೆಗೆ ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ. ಅಪಘಾತದಲ್ಲಿ ಬುಲೆಟ್ ಸವಾರ ಗಂಭೀರ ಗಾಯಗೊಂಡಿದ್ದು, ಕುಂದಾಪುರದ ಖಾಸಗೀ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾನೆ. ಸಹ ಸವಾರ ಕೃಷ್ಣ ಎಂಬಾತನಿಗೆ ಮರ್ಮಾಂಗಕ್ಕೆ ಗಾಯವಾಗಿದ್ದು, ಮಣಿಪಾಲದ ಖಾಸಗೀ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.