BlogElectionGovernmentHighlightsHuman storiesLifestyleLocal newsOthersPoliticsState newsTop StoriesTrending

ಕುಂದಾಪುರ: ಬಿಜೆಪಿ ಸುಳ್ಳು ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ನಿಂದ ನಾಳೆ ನಾಲ್ಕು ಕಡೆ ಪ್ರತಿಭಟನೆ

Aware others:

ಕುಂದಾಪುರ: 9/ 11 ಸಮಸ್ಯೆ , ಅಕ್ರಮ ಸಕ್ರಮ, 53 ಮತ್ತು 57 ಅರ್ಜಿ ತಿರಸ್ಕಾರ, ವೃದ್ಧಾಪ್ಯ ವೇತನ ಮತ್ತು ಸಂಧ್ಯಾ ಸುರಕ್ಷಾ ರದ್ದತಿ ಮತ್ತು ವಿದ್ಯುತ್ ದರ ಏರಿಕೆ ಕುರಿತು ಬಿಜೆಪಿ ಮಾಡುತ್ತಿರುವ ಅಪಪ್ರಚಾರ ಖಂಡಿಸಿ, ವಾಸ್ತವತೆಯನ್ನು ಜನರಿಗೆ ಮನವರಿಕೆ ಮಾಡುವ  “ಬಿಜೆಪಿ ಸುಳ್ಳಿನ ಪ್ರತಿಭಟನೆಗೆ ಕಾಂಗ್ರೆಸ್ ಪಕ್ಷದ ಸತ್ಯ ದರ್ಶನ ಪ್ರತಿಭಟನಾ ಸಪ್ತಾಹ” ದ ಅಂಗವಾಗಿ ಕುಂದಾಪುರ ಬ್ಲಾಕ್ ವ್ಯಾಪ್ತಿಯಲ್ಲಿ ನಾಳೆ‌ ಬೆಳಿಗ್ಗೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಕುಂದಾಪುರ ಪುರಸಭೆ ಮುಂಭಾಗ, ಮೊಳಹಳ್ಳಿ ಗ್ರಾಮ ಪಂಚಾಯತ್ ಮುಂಭಾಗ, ತೆಕ್ಕಟ್ಟೆ ಗ್ರಾಮ ಪಂಚಾಯತ್ ಮುಂಭಾಗ ಹಾಗು ಆನಗಳ್ಳಿ ಗ್ರಾಮ ಪಂಚಾಯತ್ ಎದುರುಗಡೆ ಪ್ರತಿಭಟನಾ ಕಾರ್ಯಕ್ರಮ‌ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!