ಕುಂದಾಪುರ: ಜ್ಯೂನಿಯರ್ ಕಾಲೇಜಿನಲ್ಲಿ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ
ಕುಂದಾಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮತದಾರರ ಸಾಕ್ಷರತಾ ಸಂಘ ಮತ್ತು ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ ಜಂಟಿಯಾಗಿ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನವನ್ನು ಆಚರಿಸಲಾಯಿತು.

ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿಯ ಮಕ್ಕಳ ರಕ್ಷಣಾಧಿಕಾರಿ ಚಂದ್ರಶೇಖರ್ ಪ್ರಾಸ್ತವಿಸಿದರು.
ಇತಿಹಾಸ ಉಪನ್ಯಾಸಕರಾದ ಪೂರ್ಣಿಮಾ ನಾಯಕ್ ಉಪಸ್ಥಿತರಿದ್ದರು. ಇ ಎಲ್ ಸಿ ಕ್ಲಬ್ ನ ಸಂಚಾಲಕಿ ಸಂಧ್ಯಾ ನಾಯಕ್ ಕಾರ್ಯಕ್ರಮ ಆಯೋಜಿಸಿದ್ದರು. ಕಲಾವಿಭಾಗದ ದೀಪ್ತಿ ಎಲ್ಲ ವಿದ್ಯಾರ್ಥಿಗಳಿಗೆ ವಿಶ್ವ ಬಾಲಕಾರ್ಮಿಕ ವಿರೋಧಿ ದಿನದ ಪ್ರತಿಜ್ಞಾವಿಧಿ ಬೋಧಿಸಿದರು.
