BlogEconomyEducationEntertainmentFashionGovernmentHighlightsHuman storiesLifestyleLocal newsOthersPoliticsTop StoriesTrendingWomen Care

ಉಡುಪಿ: ಏಕ ನಿವೇಶನ ನಕ್ಷೆ ಸಮಸ್ಯೆ ಪರಿಹರಿಸಿ: ಜಿಲ್ಲಾ ಮಟ್ಟದ ಸಭೆಯಲ್ಲಿ  ಶಾಸಕ ಕೊಡ್ಗಿ ಆಗ್ರಹ

Aware others:

ಉಡುಪಿ: ಕಾಯ್ದೆಯಲ್ಲಿನ ಎಲ್ಲಾ ಲೋಪ ದೋಷಗಳನ್ನು ಪಟ್ಟಿ ಮಾಡಿ ಜಿಲ್ಲೆಗೆ ಪೂರಕವಾಗುವಂತೆ ಆದೇಶದಲ್ಲಿ ಸೂಕ್ತ ಮಾರ್ಪಾಟು ಮಾಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಶಾಸಕರೊಂದಿಗೆ ಚರ್ಚಿಸಿ ಬಳಿಕ ರಾಜ್ಯ ಮಟ್ಟದ ಅಧಿಕಾರಿಗಳು ಮತ್ತು ಸಚಿವರೊಂದಿಗೆ ಸಭೆ ನಡೆಸಲು ಮುಂದಿನ ಕ್ರಮ ಕೈಗೊಳ್ಳುವ ಬಗ್ಗೆ ತೀರ್ಮಾನಿಸಬೇಕು ಎಂದು ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಆಗ್ರಹಿಸಿದರು.

ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆಯಲಾದ ಏಕ ನಿವೇಶನ ನಕ್ಷೆ  ಸಮಸ್ಯೆಗಳ ಸಭೆಯಲ್ಲಿ ಭಗಾವಹಿಸಿ ಅವರು ಮಾತನಾಡಿದರು. ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳಲ್ಲಿ ವಾಸ್ತವ್ಯ ಮತ್ತು ವಾಸ್ತವ್ಯೇತರ ಕಟ್ಟಡ ನಿರ್ಮಾಣಕ್ಕೆ ಭೂಗಡಿ ಅಂಚಿನಿಂದ 6 ಮೀಟರ್ ಬಿಟ್ಟು ಕಟ್ಟಡ ನಿರ್ಮಾಣಕ್ಕೆ ಅನುಮತಿ  ನೀಡುವ ಬಗ್ಗೆ ಹಾಗೂ ಯೋಜನಾ ಮತ್ತು ಗ್ರಾಮಾಂತರ ಇಲಾಖೆಯ ಹೊಸ ಮಾರ್ಗಸೂಚಿಯಲ್ಲಿನ ಕೆಲವೊಂದು ವಿಚಾರಗಳು ಉಡುಪಿ ಜಿಲ್ಲೆಯ ಭಾಗಕ್ಕೆ ವಿಭಿನ್ನವಾಗಿದ್ದು ಏಕ ವಿನ್ಯಾಸ ನಕ್ಷೆ ಅನುಮೋದನೆ ತೊಂದರೆ ಆಗುತ್ತಿದೆ‌ ಎಂದ ಅವರು, ಈಗಾಗಲೇ ಪಡೆದಿರುವ ಅರ್ಜಿಗಳನ್ನು ತ್ವರಿತಗತಿ ವಿಲೇವಾರಿ ಮಾಡುವಂತೆ ಸೂಚಿಸಿದರು.

ಉಡುಪಿ ಚಿಕ್ಕಮಗಳೂರು ಸಂಸದ ಕೋಟ ನಿವಾಸ ಪೂಜಾರಿ, ಶಾಸಕರಾದ ಸುನೀಲ್ ಕುಮಾರ್,ಬಯಶ್ಪಾಲ್ ಸುವರ್ಣ, ಗುರುರಾಜ್ ಗಂಟಿಹೊಳೆ, ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ನಗರಸಭೆ ಅಧ್ಯಕ್ಷರ ಪ್ರಭಾಕರ ಪೂಜಾರಿ, ಜಿಲ್ಲಾಧಿಕಾರಿ ಸ್ವರೂಪ ಟಿ ಕೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!