ಜುಲೈ 10: ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್‌ನಲ್ಲಿ ಕಾನೂನು ಅರಿವು, ಸಂಸತ್ ಪದಗ್ರಹಣ

ಕುಂದಾಪುರ: ನಾಳೆ ಜುಲೈ 10ರಂದು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ ನ ಸುಜ್ಞಾನ ಪದವಿ ಪೂರ್ವ ಕಾಲೇಜು ಹಾಗೂ ವಿದ್ಯಾರಣ್ಯ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಪದಗ್ರಹಣ ಹಾಗೂ ಕಾನೂನು ಅರಿವು ಕಾರ್ಯಕ್ರಮ ನಡೆಯಲಿದೆ.
ಕಾರ್ಯಕ್ರಮವನ್ನು ಬೆಳಿಗ್ಗೆ 11 ಗಂಟೆಗೆ ಉಡುಪಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಹರಿರಾಮ್ ಶಂಕರ್ ಐ.ಪಿ.ಎಸ್ ಉದ್ಘಾಟಿಸಲಿದ್ದಾರೆ.
ಸಂಸ್ಥೆಯ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸುಜ್ಞಾನ ಎಜ್ಯುಕೇಶನ್ ಟ್ರಸ್ಟ್ ನ ಪ್ರಕಟಣೆ ತಿಳಿಸಿದೆ.
