ನಾಪತ್ತೆಯಾದ ಮೀನುಗಾರ ಪತ್ತೆಗೆ ಕ್ರಮ, ತುರ್ತು ಪರಿಹಾರ – ಶಾಸಕ ಗಂಟಿಹೊಳೆ

ಗಂಗೊಳ್ಳಿಯಲ್ಲಿ ಮಂಗಳವಾರ ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಮೂವರು ಮೀನುಗಾರರು ನಾಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಶಾಸಕ ಗುರುರಾಜ್ ಗಂಟಿಹೊಳೆ ಕಳವಳ ವ್ಯಕ್ತಪಡಿಸಿದ್ದಾರೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮ ವಹಿಸಬೇಕೆಂದು ಅವರು ನಿರ್ದೇಶಿಸಿದ್ದಾರೆ. ಅಲ್ಲದೇ, ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ ಅಗತ್ಯ ಪರಿಹಾರ ಒದಗಿಸಲು ಮೀನುಗಾರಿಕಾ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಇಲಾಖೆಯಿಂದ ಕುಟುಂಬಕ್ಕೆ ತಲಾ 10 ಲಕ್ಷ ಮೊತ್ತದ ಪರಿಹಾರವನ್ನು ತುರ್ತಾಗಿ ಒದಗಿಸಲಾಗುತ್ತದೆ ಎಂದು ಪ್ರಕರಟಣೆಯಲ್ಲಿ ತಿಳಿಸಿದ್ದಾರೆ. ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಜೋರಾಗಿದ್ದು, ನಾಡದೋಣಿ, ಟ್ರಾಲ್ ದೋಣಿ ಮೀನುಗಾರರು ವಿಶೇಷ ಎಚ್ಚರಿಕೆ ವಹಿಸಬೇಕು ಮತ್ತು ಕಡ್ಡಾಯವಾಗಿ ಲೈಫ್ ಜಾಕೇಟ್ ಬಳಸುವಂತೆ ಅವರು ಮನವಿ ಮಾಡಿದ್ದಾರೆ.
