AccidentBlogCrime newsGovernmentHighlightsHuman storiesLifestyleLocal newsObituaryOthersTop StoriesTrending

ರೋಗಿ ಕರೆದೊಯ್ಯುತ್ತಿದ್ದ ಅಂಬ್ಯುಲೆನ್ಸ್ ಅಪಘಾತ – ರೋಗಿ ಸಾವು

Aware others:

ಕುಂದಾಪುರ: ಆಸ್ಪತ್ರೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದ ಪರಿಣಮ ರೋಗಿ ಸಾವನ್ನಪ್ಪಿದ ಘಟನೆ ಎಂಜಿಎಂ ಕಾಲೇಜಿನ ಎದುರು ಶನಿವಾರ ನಡೆದಿದೆ.

ಕೋಟೇಶ್ವರದಿಂದ ಮಣಿಪಾಲ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ರೋಗಿಯೊಬ್ಬರನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ಕಾಲೇಜಿನ ಬಳಿ ರಸ್ತೆ ಡಿವೈಡರ್ ಬಳಿ ನಿಯಂತ್ರಣ ಕಳೆದುಕೊಂಡು ಬ್ಯಾರಿಕೇಡ್‌ಗಳಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಅಪಘಾತದ ನಂತರ, ತಕ್ಷಣ ರೋಗಿಯನ್ನು ಮತ್ತೊಂದು ಆ್ಯಂಬುಲೆನ್ಸ್‌ಗೆ ಸ್ಥಳಾಂತರಿಸಿ, ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!