ಹೊಂಡ ಹಾರಿದ ಬೈಕ್ : ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ಹಿಂಬದಿ ಸವಾರೆ
ಕುಂದಾಪುರ: ಬೈಕಿನಲ್ಲಿ ಮಹಿಳೆಯೊಬ್ಬರನ್ನು ಹಿಂಬದಿಯಲ್ಲಿ ಕುಳ್ಳಿರಿಸಿಕೊಂಡು ಬರುತ್ತಿದ್ದ ವೇಳೆ ಬೈಕ್ ಸವ ಾರಹೊಂಡ ಹಾರಿಸಿದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಕೊಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಲೂರು ಗ್ರಾಮದ ನಾಗೋಡಿ ಘಾಟಿಯ ರಾಷ್ಟ್ರೀಯ ಹೆದ್ದಾರಿ 766ಸಿ ರಸ್ತೆಯಲ್ಲಿ ಶುಕ್ರವಾರ ಸಂಜೆ ಈ ಘಟನೆ ನಡೆದಿದೆ. ಬೈಕಿನ ಹಿಂಬದಿ ಸವಾರೆ ಸಾಧು ಎಂಬಾಕೆ ಗಂಭಿರ ಗಾಯಗೊಂಡು ಆಸ್ಪತ್ರೆ ಸೇರಿದವರು.

ಹರೀಶ್ ಎಂಬಾತ ತನ್ನ ಬೈಕಿನಲ್ಲಿ ಸಾಧು ಎಂಬುವರನ್ನು ಕುಳ್ಳಿರಿಸಿಕೊಂಡು ನಿಟ್ಟೂರು ಕಡೆಯಿಂದ ಕೊಲ್ಲೂರು ಕಡೆಗೆ ಬರುತ್ತಿದ್ದರು. ನಾಗೋಡಿ ಘಾಟಿಯಲ್ಲಿ ಬರುತ್ತಿದ್ದ ವೇಳೆ ಬೈಕ್ ರಸ್ತೆಯಲ್ಲಿದ್ದ ಹೊಂಡಕ್ಕೆ ಬಿದ್ದಿದೆ. ಪರಿಣಾಮ ಬೈಕ್ ನಿಯಂತ್ರಣ ತಪ್ಪಿದೆ. ಹಿಂಬದಿ ಸವಾರೆ ಸಾಧು ರವರು ಬೈಕಿಂದ ಎಸೆದು ರಸ್ತೆಯಲ್ಲಿ ಬಿದ್ದಿದ್ದು, ಅವರ ತಲೆಗೆ ಒಳಪೆಟ್ಟು ಗಾಯವಾಗಿ ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಕುಂದಾಪುರ ನ್ಯೂ ಮೆಡಿಕಲ್ ಸೆಂಟರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಕೊಲ್ಲೂರು ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.