BlogEntertainmentFashionHighlightsHuman storiesLifestyleLocal newsOthersReligionSuccess storiesTop StoriesTrending

ಗಂಗೊಳ್ಳಿ: ಜುಲೈ 30ರಿಂದ ಮಲ್ಯಮಠ ದೇವಸ್ಥಾನದಲ್ಲಿ ಅಖಂಡ ಭಜನಾ ಸಪ್ತಾಹ

Aware others:

ಕುಂದಾಪುರ : ಪುರಾಣ ಪ್ರಸಿದ್ಧ ಗಂಗೊಳ್ಳಿಯ ಮಲ್ಯರಮಠ ಶ್ರೀ ವೆಂಟಕರಮಣ ದೇವಸ್ಥಾನದಲ್ಲಿ ವರ್ಷಂಪ್ರತಿ ಶ್ರಾವಣ ಮಾಸದಲ್ಲಿ ಜರಗುವ ’ಅಖಂಡ ಭಜನಾ ಸಪ್ತಾಹ’ ಮಹೋತ್ಸವ ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೇರ ಸ್ವಾಮೀಜಿಯವರ ಮಾರ್ಗದರ್ಶನದಂತೆ ಜು.30ರಿಂದ ಆ.6ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಜು.30ರಂದು ಬೆಳಿಗ್ಗೆ 9.05ರ ಸಿಂಹ ಲಗ್ನ ಸುಮುಹೂರ್ತದಲ್ಲಿ ದೀಪ ಸ್ಥಾಪನಾಪೂರ್ವಕ ಭಜನಾ ಸಪ್ತಾಹ ಪ್ರಾರಂಭವಾಗಲಿದ್ದು, ಆ.6ರಂದು ದೀಪ ವಿಸರ್ಜನೆಯೊಂದಿಗೆ ಸಮಾಪನಗೊಳ್ಳಲಿದೆ. ಆ.5ರಂದು ಸಂಜೆ ೫ ಗಂಟೆಗೆ ನಗರ ಭಜನೆ, ರಾತ್ರಿ ವಿಶೇಷ ಪೂಜೆ, ಪ್ರಸಾದ ವಿತರಣೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ. ಅಖಂಡ ಭಜನಾ ಸಪ್ತಾಹ ಮಹೋತ್ಸವ ಸಮಯದಲ್ಲಿ ರಾಜ್ಯದ ವಿವಿಧೆಡೆಗಳಿಂದ ಆಗಮಿಸುವ ಭಜನಾ ಮಂಡಳಿಗಳು ಭಜನಾ ಸೇವೆ ಸಮರ್ಪಿಸಲಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!