BlogEconomyEducationHighlightsHuman storiesLifestyleLocal newsOthersTechTop StoriesTrendingWomen Care

ವಿದ್ಯಾರಣ್ಯ: ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ;ಸಿಎ ದೀಪಿಕಾ ವಸನಿ

Aware others:

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಓರಿಯೆಂಟೇಶನ್ ಕಾರ್ಯಕ್ರಮ

ಕುಂದಾಪುರ: ಜೀವನದಲ್ಲಿ ಕಷ್ಟವೆಂದುಕೊಂಡರೆ ಎಲ್ಲವೂ ಕಷ್ಟವಾಗುತ್ತದೆ. ಹಾಗಾಗಿ ನಿರಂತರ ಅಭ್ಯಾಸದಿಂದ ಸಾಧನೆ ಸಾಧ್ಯವಾಗುತ್ತದೆ. ಬದುಕಿನಲ್ಲಿ ಪರಿಶ್ರಮ  ಅತೀ ಅಗತ್ಯ.ವಿದ್ಯಾರ್ಥಿ ಜೀವನವನ್ನು ಖುಷಿಯಿಂದ ಕಳೆಯುವುದರ ಜೊತೆಗೆ ಪರಿಶ್ರಮದ ಕಡೆ ಗಮನಹರಿಸಿ.ಇದರಿಂದ ನಿಮ್ಮ ಜೀವನ ಚೆನ್ನಾಗಿರುತ್ತದೆ ಎಂದು ಕೆ.ವಿ.ಸಿ ಸಂಸ್ಥೆಯ ಸಿ.ಎ. ದೀಪಿಕಾ ವಸನಿ ಹೇಳಿದರು. ಅವರು ಸೋಮವಾರ ಯಡಾಡಿ-ಮತ್ಯಾಡಿಯ ಸುಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಳ್ಳಲಾದ ಸಿಎ ಹಾಗೂ ಸಿಎಸ್ ಫೌಂಡೇಶನ್ ಕೋರ್ಸ್ನ  ಓರಿಯೆಂಟೇಶನ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಂಸ್ಥೆಯ ಅಧ್ಯಕ್ಷರಾದ ಡಾ.ರಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಿಎ ಮತ್ತು ಸಿಎಸ್ ಹುದ್ದೆಗಳಿಗೆ ಇರುವ ಬೇಡಿಕೆಯ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.ಸರಿಯಾದ ರೀತಿಯಲ್ಲಿ ಪರಿಶ್ರಮ ವಹಿಸಿದರೆ ಜೀವನದಲ್ಲಿ ಸಾಧನೆ ಮಾಡಬಹುದು. ಸವಾಲುಗಳನ್ನು ಎದುರಿಸಬಹುದು.ವಿದ್ಯಾರ್ಥಿಗಳಲ್ಲಿ ಆ ಶಕ್ತಿ ಇದೆ ಎಂದರು. ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ಸೋಶಿಯಲ್ ಮೀಡಿಯಾ, ಟಿವಿ ಎಂದು ಸಮಯವನ್ನು ದುರುಪಯೋಗಪಡಿಸಿಕೊಳ್ಳದೇ ಬದುಕಿಗೊಂದು ಗುರಿ ಇಟ್ಟುಕೊಂಡು ಮುನ್ನುಗ್ಗಬೇಕು. ಕನಸನ್ನು ನನಸು ಮಾಡಿಕೊಳ್ಳಬೇಕು. ಸಿಎ, ಎಸ್ ನಂತಹ ವೃತ್ತಿಪರ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಂಡು ಸುಂದರ ಬದುಕು ಕಟ್ಟಿಕೊಳ್ಳಬೇಕು” ಎಂದರು.

ಕಾರ್ಯದರ್ಶಿ ಪ್ರತಾಪ್ಚಂದ್ರ ಶೆಟ್ಟಿ ಮತ್ತು ಖಜಾಂಚಿ ಭರತ್ ಶೆಟ್ಟಿ, ಮಂಗಳೂರಿನ ಕೆ.ವಿ.ಸಿ ಅಕಾಡೆಮಿಯ ನಿರ್ದೇಶಕರಾದ ಸಿಎ ಜೇಸನ್ ಕ್ಯಾಸ್ತಲಿನೊ, ಕುಂದಾಪುರದ ಚಾರ್ಟೆಡ್ ಅಕೌಂಟೆಂಟ್ ಸಿಎ ನಾಗರಾಜ್ ಹೆಬ್ಬಾರ್ ಉಪಸ್ಥಿತರಿದ್ದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥ ವಿನಯ್ ಕುಮಾರ್ ನಿರೂಪಿಸಿದರು. ಪ್ರಾಂಶುಪಾಲ ರಂಜನ್ ಬಿ.ಶೆಟ್ಟಿ ಸ್ವಾಗತಿಸಿ, ಸಿಎ ಫೌಂಡೇಶನ್ ಸಂಯೋಜಕ ಪ್ರಮಥ್ ಶೆಟ್ಟಿ ವಂದಿಸಿದರು. ಕಾಲೇಜಿನ ಭೋದಕ ಹಾಗೂ ಭೋದಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.


Aware others:

Leave a Reply

Your email address will not be published. Required fields are marked *

error: Content is protected !!