BlogEducationEntertainmentFashionGovernmentHighlightsHuman storiesLifestyleLocal newsOthersPoliticsProtestTop StoriesTrendingWomen Care

ಸೋಮೇಶ್ವರ, ದೊಂಬೆ ಕರಾವಳಿ ಮಾರ್ಗದಲ್ಲಿ ಸರ್ಕಾರೀ ಬಸ್ ಸಂಚಾರಕ್ಕೆ ಆಗ್ರಹಿಸಿ ಪ್ರತಿಭಟನೆ

Aware others:

ಕುಂದಾಪುರ: ಕಟ್ಟಡ ಕಾರ್ಮಿಕರ ಮಹಿಳಾ ಉಪಸಮಿತಿ ಮತ್ತು ಜನವಾದಿ ಮಹಿಳಾ ಸಂಘಟನೆಯ ಸಹಯೋಗದಲ್ಲಿ ಬೈಂದೂರು ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಬೈಂದೂರು, ಸೋಮೇಶ್ವರ,ದೊಂಬೆ, ಕರಾವಳಿ ಮಾರ್ಗವಾಗಿ ಶಿರೂರಿಗೆ ಸರಕಾರಿ ಬಸ್ಸು ವ್ಯವಸ್ಥೆ ಮಾಡಿ ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಸೌಲಭ್ಯಗಳನ್ನು ಒದಗಿಸಲು ಆಗ್ರಹಿಸಿ ಶಿರೂರು ಗ್ರಾಮ ಪಂಚಾಯತ್ ಎದುರು ಶಿರೂರು ನಾಗರಿಕರಿಂದ ಪ್ರತಿಭಟನೆ ನಡೆಯಿತು.

ಉಡುಪಿ ಜಿಲ್ಲೆಯಲ್ಲಿ ಸರಕಾರಿ ಬಸ್ಸಿನ ಸೇವೆ ಹಾಗೂ ಅದರಲ್ಲಿ ಬಡ ಜನರಿಗೆ ಸಿಗುವ ಸೌಲಭ್ಯಗಳನ್ನು ವಂಚಿತರಾದ ಜನರಿಗೆ ಸಿಗಬೇಕು ಎಂದು ಹೋರಾಟ ನಡೆಯುತ್ತಿದ್ದರೂ  ಜಿಲ್ಲಾ ಸಾರಿಗೆ ಪ್ರಾಧಿಕಾರ ಕಾಳಜಿ ವಹಿಸುತ್ತಿಲ್ಲ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರಿಗೆ ಪರಮಾಧಿಕಾರ ಇರುವುದರಿಂದ ಜನರಿಗೆ ಅನುಕೂಲವಾಗುವ ಸರಕಾರಿ ಬಸ್ಸು ಗ್ರಾಮೀಣ ಪ್ರದೇಶಗಳಿಗೆ ಆರಂಭಿಸಲು ಕ್ರಮವಹಿಸಬೇಕು ಎಂದು ಸಿಐಟಿಯು ನಾಯಕ ಸುರೇಶ್ ಕಲ್ಲಾಗರ ಹೇಳಿದರು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಶೀಲಾವತಿ ಮಾತನಾಡಿ ಶಿರೂರು ಮಹಿಳೆಯರಿಗೆ ವಿದ್ಯಾರ್ಥಿಗಳಿಗೆ ನ್ಯಾಯ ಸಿಗದಿದ್ದರೆ ಉಡುಪಿ ಸಾರಿಗೆ ಇಲಾಖೆ ಎದುರು ಧರಣಿ ನಡೆಸಲಾಗುವುದು ಎಂದು ಹೇಳಿದರು. ಜನವಾದಿ ಮಹಿಳಾ ಸಂಘಟನೆಯ ಬೈಂದೂರು ತಾಲೂಕು ಕಾರ್ಯದರ್ಶಿ ನಾಗರತ್ನ ನಾಡ ಮಾತನಾಡಿ; ಪ್ರವಾಸಿ ತಾಣವಾಗಿರುವ ಸೋಮೇಶ್ವರ,ಕರಾವಳಿ ಶಿರೂರುಗಳನ್ನು ಜಿಲ್ಲಾಡಳಿತ ಕಡೆಗಣಿಸುತ್ತಿದೆ ಎಂದರು.

ಬೈಂದೂರು ಕಟ್ಟಡ ಸಂಘದ ಅಧ್ಯಕ್ಷ ಶ್ರೀ ರಾಜೀವ ಪಡುಕೋಣೆ,ಪ್ರಧಾನ ಕಾರ್ಯದರ್ಶಿ  ರೊನಾಲ್ಡ್ ರಾಜೇಶ್, ಸಹ ಪದಾಧಿಕಾರಿಗಳಾದ ಶ್ರೀಧರ ದೇವಾಡಿಗ ಉಪ್ಪುಂದ, ಗೊಪಾಲ ಕೃಷ್ಣ, ರೋನಿ ನಜರೆತ್ ಹಾಗೂ ಸಿಡಬ್ಲ್ಯೂಎಫ್ಐ ರಾಜ್ಯ ಸಮಿತಿ ಸದಸ್ಯ ರಮೇಶ್ ಗುಲ್ವಾಡಿ ಉಪಸ್ಥಿತರಿದ್ದರು. ಜನವಾದಿ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಕಟ್ಟಡ ಮಹಿಳಾ ಉಪಸಮಿತಿಯ ನಾಗರತ್ನ ನಾಡ, ಪದ್ಮಾವತಿ ಶಿರೂರು, ಶಾಂತಾ ಉಪ್ಪುಂದ ಮತ್ತು ನಾಗರತ್ನ ಪಡುವರಿ ನೇತೃತ್ವ ವಹಿಸಿದ್ದರು.

ಶಿರೂರು ಪಂಚಾಯತ್ ಉಪಾಧ್ಯಕ್ಷರು ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರ ಜೊತೆ ಮನವಿ ಸ್ವೀಕರಿಸಿ ಪಂಚಾಯತ್ ಮೂಲಕ ನಿರ್ಣಯ ಅಂಗೀಕರಿಸಿ ಸರ್ಕಾರದ ಗಮನ ಸೆಳೆಯುವುದಾಗಿ ತಿಳಿಸಿದರು.  ಸಾರಿಗೆ ಇಲಾಖೆಯ ಅಧಿಕಾರಿಗಳೂ ಮನವಿ ಸ್ವೀಕರಿಸಿ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸುವ ಭರವಸೆ ನೀಡಿದರು.


Aware others:

Leave a Reply

Your email address will not be published. Required fields are marked *

error: Content is protected !!