ಕುಂದಾಪುರ: ಪ್ರಥಮ ಚಿಕಿತ್ಸೆ ಕುರಿತ ಪ್ರಾತ್ಯಕ್ಷಿಕೆ ಆಧಾರಿತ ಮಾಹಿತಿ ಕಾರ್ಯಾಗಾರ

ಕುಂದಾಪುರ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಹಾಗೂ ಜ್ಯೂನಿಯರ್ ರೆಡ್ ಕ್ರಾಸ್ ವಿಭಾಗ ಸ.ಪ.ಪೂ ಕಾಲೇಜು ಕುಂದಾಪುರ ಇದರ ಸಹಯೋಗದೊಂದಿಗೆ “ಪ್ರಥಮ ಚಿಕಿತ್ಸೆ ಕುರಿತಾದ ಪ್ರಾತ್ಯಕ್ಷಿಕೆ ಆಧಾರಿತ ಮಾಹಿತಿ ಕಾರ್ಯಕ್ರಮ”ವನ್ನು ಹಮ್ಮಿಕೊಳ್ಳಲಾಯಿತು.
ಕುಂದಾಪುರ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರು ಹಾಗೂ ಪ್ರಥಮ ಚಿಕಿತ್ಸಾ ತರಬೇತುದಾರರು ಆಗಿರುವಂತಹ ಡಾ| ಸೋನಿ ರವರು ವಿದ್ಯಾರ್ಥಿಗಳಿಗೆ ಆಕಸ್ಮಿಕ ಅವಘಡಗಳಾದಾಗ ಯಾವ ರೀತಿಯ ಪ್ರಾಥಮಿಕ ಚಿಕಿತ್ಸೆಯನ್ನು ನೀಡಬೇಕೆಂದು ವಿವರಿಸಿದರು. ಜೊತೆಗೆ ಸಿ.ಪಿ.ಆರ್ (CPR) ಕುರಿತ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು.
ರೆಡ್ ಕ್ರಾಸ್ ಸಂಸ್ಥೆ ಕುಂದಾಪುರ ಘಟಕದ ಅಧ್ಯಕ್ಷ ಜಯಕರ ಶೆಟ್ಟಿ ಹಾಗೂ ಖಜಾಂಚಿ ಶಿವರಾಮ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ. ಅಧ್ಯಕ್ಷತೆ ವಹಿಸಿದ್ದರು. ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ವನಿತಾ ನಾಯ್ಕ ಸ್ವಾಗತಿಸಿದರು. ಜ್ಯೂನಿಯರ್ ರೆಡ್ ಕ್ರಾಸ್ ಘಟಕದ ಸಂಚಾಲಕ ರಾಜೇಶ್ ಹೆಬ್ಬಾರ್ ವಂದಿಸಿದರು. ಸ್ವಯಂ ಸೇವಕ ವಿಶ್ವನಾಥ ಕಾರ್ಯಕ್ರಮ ನಿರೂಪಿಸಿದರು. ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
