ವಿದ್ಯಾರಣ್ಯ; ನಾಲ್ಕು ವಿದ್ಯಾರ್ಥಿಗಳು ಯೋಗಾಸನ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ



ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೆಸ್ಕತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕುಂದಾಪುರ ವಲಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕು ವಿದ್ಯಾರ್ಥಿನಿಯರು ಹಾಗೂ ಒಬ್ಬ ವಿದ್ಯಾರ್ಥಿ ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

17ರ ವಯೋಮಾನದೊಳಗಿನ ವಿಭಾಗದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಕುಮಾರಿ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ, 14 ವಯೋಮಾನದೊಳಗಿನವರಲ್ಲಿ 8ನೇ ತರಗತಿ ಹಂಸಿ, ಗಹನ ಆರ್. ಕುಲಾಲ್ ಪ್ರಥಮ, 17ರ ವಯೋಮಾನ ವಿಭಾಗದಲ್ಲಿ 9ನೇ ತರಗತಿಯ ವಿನಯ್ ಸಿ.ಎಸ್. ಮೊದಲ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು.
ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.