ವಿದ್ಯಾನಗರ: ಚದುರಂಗದಲ್ಲಿ ಸರಸ್ವತಿ ವಿದ್ಯಾಲಯದ ಇಬ್ಬರು ಜಿಲ್ಲೆಗೆ ಆಯ್ಕೆ
ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕುಂದಾಪುರ ಹಾಗೂ ರಾಮ್ ಸನ್ ಸರಕಾರಿ ಪ್ರೌಢಶಾಲೆ ಕಂಡ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕುಂದಾಪುರ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ಸಿದ್ಧಾಪುರ ವಿದ್ಯಾನಗರದ ಸರಸ್ವತಿ ವಿದ್ಯಾಲಯದ ಎಂಟನೇ ತರಗತಿ ವಿದ್ಯಾರ್ಥಿನಿ ಶ್ರೀ ಲಕ್ಷ್ಮಿ ಹಾಗೂ 9ನೇ ತರಗತಿ ವಿದ್ಯಾರ್ಥಿನಿ ಸಾನ್ವಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ಶ್ರೀ ಲಕ್ಷ್ಮಿ 14ರ ವಯೋಮಾನದೊಳಗಿನ ವಿಭಾಗದಲ್ಲಿ ಆಯ್ಕೆಯಾದರೆ ಸಾನ್ವಿ 17ರ ವಯೋಮಾನದೊಳಗಿನ ವಿಭಾಗದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದು, ಜ್ಞಾನಸರಸ್ವತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ, ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
