BlogCulturalEducationEntertainmentFashionHighlightsHuman storiesLifestyleLocal newsOthersSportsSuccess storiesTop StoriesTrending

ವಿದ್ಯಾರಣ್ಯ: ಚದುರಂಗದಲ್ಲಿ ವಿದ್ಯಾರಣ್ಯ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ‌ ಆಯ್ಕೆ

Aware others:

ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ರಾಮ್ಸನ್ ಪ್ರೌಢಶಾಲೆ ಕಂಡ್ಲೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಕುಂದಾಪುರ ವಲಯ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ನಾಲ್ಕು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಚದುರಂಗ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

17ರ ವಯೋಮಾನದೊಳಗಿನ ಹುಡುಗಿಯರ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಪ್ರಕೃತಿ ಪಿ ಶೆಟ್ಟಿ ಮತ್ತು 9ನೇ ತರಗತಿ ವಿದ್ಯಾರ್ಥಿನಿ ಸೌಜನ್ಯ  ಹಾಗೂ 17ರ ವಯೋಮಾನದ  ಹುಡುಗರ ವಿಭಾಗದಲ್ಲಿ 10ನೇ ತರಗತಿ ವಿದ್ಯಾರ್ಥಿ ಮನ್ವಿತ್ ಬಿ ಮತ್ತು 8ನೇ ತರಗತಿ ವಿದ್ಯಾರ್ಥಿ ರಿತೇಶ್ ಕುಮಾರ್ ಎ.ಕೆ. ಜಿಲ್ಲಾಮಟ್ಟಕ್ಕೆ ಆಯ್ಕೆಯಾದವರು.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಮತ್ತು ಸೂರ್ಯ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಕುಮಾರಿ ಕಾವ್ಯಾ ಶೆಟ್ಟಿ ತಂಡ ವ್ಯವಸ್ಥಾಪಕರಾಗಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!