ವಿದ್ಯಾರಣ್ಯ: ಯೋಗಾಸನದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ : ಮೂರು ಚಿನ್ನ ಪಡೆದ ಲಾಸ್ಯ ಮಧ್ಯಸ್ಥ
ಕುಂದಾಪುರ: ಕರ್ನಾಟಕ ಯೋಗಾಸನ ಸ್ಪೋರ್ಟ್ಸ್ ಅಸೋಸಿಯೇಷನ್ ಹಾಗೂ ಪತಂಜಲಿ ಯೋಗ ಪೀಠ (ಹರಿದ್ವಾರ) ಉಡುಪಿ ಜಿಲ್ಲೆ ಸಹಯೋಗದೊಂದಿಗೆ ನಡೆದ ಉಡುಪಿ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಇಂಗ್ಲಿಷ್ ಮಾಧ್ಯಮ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಲಾಸ್ಯ ಮಧ್ಯಸ್ಥ 3 ಚಿನ್ನದ ಪದಕಗಳನ್ನು ಗಳಿಸಿ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ.
