ವಿದ್ಯಾರಣ್ಯ: ಹಾಲಾಡಿ ವೃತ್ತ ಕಬಡ್ಡಿ ಪಂದ್ಯಾಟದಲ್ಲಿ ಹುಡುಗರ ತಂಡ ಪ್ರಥಮ- ಶಾಲೆಯಿಂದ ಅಭಿನಂದನೆ

ಕುಂದಾಪುರ: ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿರುವ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಲಯಮಟ್ಟದ ಕಬ್ಬಡ್ಡಿಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುದುರಿ, ಹಾಲಾಡಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಹಾಲಾಡಿ ವೃತ್ತ ಮಟ್ಟದ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ತಂಡದ ನಾಯಕ 8ನೇ ತರಗತಿಯ ಸೃಜನ್ ಮಾರಿಗುಡ್ಡಿ ಮತ್ತು ಸಹ ಆಟಗಾರರಿಗೆ ಪಾರಿತೋಷಕ, ಪದಕ ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಗೌರವಿಸಲಾಯಿತು.
ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಮಾರ್ಗದರ್ಶನ ನೀಡಿದ್ದರು. ಸಂಸ್ಥೆಯ ವಸತಿ ನಿಲಯದ ಪಾಲಕಿ ನಯನ ತಂಡ ವ್ಯವಸ್ಥಾಪಕಿಯಾಗಿದ್ದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ತಂಡವನ್ನು ಅಭಿನಂದಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದರು.
