ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ವತಿಯಿಂದ ವನಮಹೋತ್ಸವ ಕಾರ್ಯಕ್ರಮ
ಕುಂದಾಪುರ: ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ಮತ್ತು ಇಂಟರಾಕ್ಟ್ ಕ್ಲಬ್ ನಿವೇದಿತಾ ಪ್ರೌಢಶಾಲೆ ಬಸ್ರೂರು ಇದರ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ ಆ.6ರ ಬುಧವಾರ ನಿವೇದಿತಾ ಪ್ರೌಢಶಾಲೆ ಬಸ್ರೂರಿನ ದಿ. ವೀರರಾಜೇಂದ್ರ ಹೆಗ್ಡೆ ಸಭಾಭವನದಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ನಿವೃತ್ತ ಮುಖ್ಯೋಪಾಧ್ಯಾಯ ಹೇರಿಕುದ್ರು ಕೊರಗಯ್ಯ ಶೆಟ್ಟಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯೋಪಾಧ್ಯಾಯ ಸುಬ್ಬ ಕೆ ಅಧ್ಯಕ್ಷತೆವಹಿಸಿದ್ದರು. ಲಯನ್ಸ್ ಕ್ಲಬ್ ನ ಅಧ್ಯಕ್ಷ ಡಾ.ಅಂಪಾರು ನಿತ್ಯಾನಂದ ಶೆಟ್ಟಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಲ .ರತ್ನಾಕರ ಶೆಟ್ಟಿ ಕಂದಾವರ, ಪ್ರಧಾನ ಕಾರ್ಯದರ್ಶಿ ಲ. ಭುಜಂಗ ಶೆಟ್ಟಿ ರಟ್ಟಾಡಿ, ನಿರ್ದೇಶಕರಾದ ಸುಕುಮಾರ ಶೆಟ್ಟಿ ಹೇರಿಕುದ್ರು, ಲ.ಪ್ರಭಾಕರ ಶೆಟ್ಟಿ ಕೋಟೇಶ್ವರ, ಲ. ಪ್ರಶಾಂತ್ ಶೆಟ್ಟಿ ಶಿರೂರು, ಲ.ಪ್ರತೀಶ್ ಶೆಟ್ಟಿ ಕೊಕ್ಕರ್ಣೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಾಲೆಯ ಇಂಟರ್ ಆಕ್ಟ್ ಕ್ಲಬ್ ನ ನಿರ್ದೇಶಕ ಪ್ರದೀಪ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಶಾಲಾ ಶಿಕ್ಷಕಿ ಸರೋಜಾ ಕಾರ್ಯಕ್ರಮ ನಿರೂಪಿಸಿ, ದೈಹಿಕ ಶಿಕ್ಷಣ ಶಿಕ್ಷಕ ರಾಜಾರಾಮ್ ಶೆಟ್ಟಿ ವಂದಿಸಿದರು.
