ವಿದ್ಯಾರಣ್ಯ: ಚದುರಂಗದಲ್ಲಿ ವಿದ್ಯಾರಣ್ಯ ವಿದ್ಯಾರ್ಥಿನಿ ಪ್ರಕೃತಿ.ಪಿ.ಶೆಟ್ಟಿ ರಾಜ್ಯಮಟ್ಟಕ್ಕೆ ಆಯ್ಕೆ
ಕುಂದಾಪುರ: ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಕೃತಿ.ಪಿ.ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ಬೈಂದೂರು ತಾಲೂಕಿನ ಉಪ್ಪುಂದದ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಜ್ಯ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಸ್ಪರ್ಧೆ ನಡೆದಿತ್ತು.

ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ಮಾರ್ಗದರ್ಶನ ನೀಡಿದ್ದರು. ಸಂಸ್ಥೆಯ ವಸತಿ ನಿಲಯದ ಪಾಲಕಿ ಸ್ಪೂರ್ತಿ ವ್ಯವಸ್ಥಾಪಕಿಯಾಗಿದ್ದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ತಂಡವನ್ನು ಅಭಿನಂದಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗ ಶುಭ ಹಾರೈಸಿದೆ.
