BlogEducationEntertainmentFashionHighlightsHuman storiesLifestyleLocal newsOthersTop StoriesTrendingWomen Care

ವಿದ್ಯಾನಗರ: ಜ್ಞಾನಸರಸ್ವತಿ ಕಾಲೇಜಿನಲ್ಲಿ ಮಾದಕ ವ್ಯಸನ ಮತ್ತು ಅದರ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ

Aware others:

ಕುಂದಾಪುರ: ಶಂಕರನಾರಾಯಣ ಪೊಲೀಸ್ ಠಾಣೆ ಹಾಗೂ ಸಿದ್ಧಾಪುರದ ಜ್ಞಾನಸರಸ್ವತಿ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಶಾ ಮುಕ್ತ ಭಾರತ ಅಭಿಯಾನ ವತಿಯಿಂದ ಬುಧವಾರ ಸಿದ್ಧಾಪುರದ ಜ್ಞಾನಸರಸ್ವತಿ ಕಾಲೇಜಿನಲ್ಲಿ ಮಾದಕ ವ್ಯಸನ ಮತ್ತು ಅದರ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಂಕರನಾರಾಯಣ ಠಾಣಾಧಿಕಾರಿ ಐ.ಆರ್ ಗಡ್ಡೇಕರ್ ಅವರು, ಯುವಜನತೆ ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಸದೃಢ ಭಾರತ ನಿರ್ಮಾಣದಲ್ಲಿ ವಿದ್ಯಾರ್ಥಿಗಳು ಮತ್ತು ಯುವಜನತೆಯ ಪಾತ್ರ ಹಿರಿದಾದುದು. ಹದಿಹರೆಯದ ವಯಸ್ಸಿನಲ್ಲಿ ತಮ್ಮ ಮನಸ್ಸುಗಳನ್ನು ನಿಗ್ರಹಿಸಿಕೊಂಡು ಸದ್ಗುಣಗಳನ್ನು ರೂಢಿಸಿಕೊಳ್ಳಬೇಕು. ಧನಾತ್ಮಕ ಚಿಂತನೆಗಳೊಂದಿಗೆ ತಮ್ಮ ಶೈಜಕ್ಷಣಿಕ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.  ಬಳಿಕ ವಿದ್ಯಾರ್ಥಿಗಳಿಗೆ ಪ್ರಮಾಣ ವಚನ ಬೋಧಿಸಿದರು.

ಈ ಸಂದರ್ಭ ಜ್ಞಾನಸರಸ್ವತಿ ಪಿಯು ಕಾಲೇಜಿನ ಪ್ರಾಂಶುಪಾಲ ಅಮರೇಶ್ ಹೆಗ್ಡೆ ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!