ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವದ ಬಹುಮಾನ ವಿತರಣೆ
79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶ್ರೀ ವೆಂಕಟರಮಣ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕುಂದಾಪುರದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ಸಂಪನ್ಮೂಲ ತರಬೇತುದಾರ ಸಂತೋಷ್ ಕುಮಾರ್ ಶೆಟ್ಟಿ ವಿದ್ಯಾರ್ಥಿಗಳಿಗೆ ಉತ್ತಮ ಮಾರ್ಗದರ್ಶನ ನೀಡಿ ಬಹುಮಾನಗಳನ್ನು ವಿತರಿಸಿದರು.

ಈ ಸಂದರ್ಭ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ರೇಷ್ಮಾ ಡಿಸೋಜ, ನರ್ಸರಿ ವಿಭಾಗದ ಮುಖ್ಯ ಶಿಕ್ಷಕಿ ಪ್ರಮೀಳಾ ಡಿಸೋಜಾ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಹರಿದಾಸ್ ಆರ್ ಮಲ್ಯ ಸ್ವಾಗತಿಸಿ, ಪ್ರಣತಿ ಶೆಣೈ ವಂದಿಸಿದರು. ವಿದ್ಯಾರ್ಥಿನಿ ಆಮ್ರಾ ಫಾತಿಮಾ ನಿರೂಪಿಸಿದರು. ಬಳಿಕ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
