ಕುಂದಾಪುರ: ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ
ಕುಂದಾಪುರ: ಡಾ. ದೇವರಾಜು ಅರಸುರವರ ಜನ್ಮದಿನಾಚರಣೆ ಪ್ರಯುಕ್ತ ಚಕೋರ ಸಾಹಿತ್ಯ ವಿಚಾರ ವೇದಿಕೆ ಉಡುಪಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇದರ ಸಹಯೋಗದೊಂದಿಗೆ ಸಮುದಾಯ ಮುಂಚಲನೆಯ ಸಾಂವಿಧಾನಿಕ ಪ್ರಜ್ಞೆ – ವಿಶೇಷ ಉಪನ್ಯಾಸ ಕಾರ್ಯಕ್ರಮವು ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಇಲ್ಲಿ ನಡೆಯಿತು.

ಕಾಲೇಜಿನ ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಡಾ. ದಿನೇಶ್ ಹೆಗ್ಡೆ ಮುಖ್ಯ ಅತಿಥಿಗಳಾಗಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಸದಸ್ಯ ಡಾ. ಜಯಪ್ರಕಾಶ್ ಶೆಟ್ಟಿ ಪ್ರಾಸ್ತಾವಿಸಿದರು. ನಿವೃತ್ತ ಪ್ರಾಂಶುಪಾಲ ಪ್ರೋ. ದೋಮ ಚಂದ್ರಶೇಖರ್ ಉಪಸ್ಥಿತರಿದ್ದರು.
ಸ.ಪ.ಪೂ ಕಾಲೇಜು ಕುಂದಾಪುರ ಇದರ ಕನ್ನಡ ಉಪನ್ಯಾಸಕ ಕಾಳಾವರ ಶ್ರೀ ಉದಯ ಕುಮಾರ ಶೆಟ್ಟಿ ಸ್ವಾಗತಿಸಿದರು. ಕನ್ನಡ ಉಪನ್ಯಾಸಕ ನಾಗರಾಜ ನಿರ್ವಹಿಸಿದರು. ಕನ್ನಡ ಉಪನ್ಯಾಸಕ ಶಂಕರ ನಾಯ್ಕ ವಂದಿಸಿದರು. ಚಕೋರ ಸಾಹಿತ್ಯ ವೇದಿಕೆಯ ರಾಮಾಂಜಿ, ವಿಜಯಾ ದಬ್ಬೆ, ಕೃಷ್ಣ ಸಾಸ್ತಾನ ಗೀತ ಗಾಯನ ನಡೆಸಿದರು.