BlogCulturalEducationEntertainmentFashionHighlightsHuman storiesLifestyleLocal newsOthersSportsState newsSuccess storiesTop StoriesTrending

ಕುಂದಾಪುರ: ಜಿಲ್ಲಾ ಮಟ್ಟದ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ 14 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ – 4ನೇ ಬಾರಿ ಉಡುಪಿ ಜಿಲ್ಲಾ ಸಮಗ್ರ ಪ್ರಶಸ್ತಿ

Aware others:

ಕುಂದಾಪುರ: ಇಲ್ಲಿನ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜು, ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಉಡುಪಿ ಇವರ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕುಸ್ತಿ ಪಂದ್ಯಾಟದಲ್ಲಿ ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನ ಹದಿನಾಲ್ಕು ವಿದ್ಯಾರ್ಥಿಗಳಾದ ರತ್ವಿಕ್, ಸೌಲತ್, ಪನ್ನಗ, ಶಶಾಂಕ್, ಮಂದಿರ್ ಶೆಟ್ಟಿ, ಸ್ವಸ್ತಿಕ್, ಕಿಶನ್, ಆದಿತ್ಯ, ಪ್ರಣಿತ್, ಗಾಯತ್ರಿ, ಆರ್ಯನ್, ವಿಜಯ್, ಮಂಥನ್, ಸೃಜನ್ ಚಿನ್ನದ ಪದಕ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು. ಇಬ್ಬರು ಬೆಳ್ಳಿಯ ಪದಕ,  ಎಂಟು ವಿದ್ಯಾರ್ಥಿಗಳು ಕಂಚಿನ ಪದಕ ಪಡೆದು ಸತತವಾಗಿ ನಾಲ್ಕನೇ ಬಾರಿ ಸಮಗ್ರ ಪ್ರಶಸ್ತಿಯನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.

ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ಫ್ರಿ ಸ್ಟೈಲ್ ಹಾಗೂ ಗ್ರಿಕೋ ರೋಮನ್ ಸ್ಟೈಲ್ ನಲ್ಲಿ ಕುಸ್ತಿ ಪಂದ್ಯಾಟ ನಡೆಯಿತು. ಉಡುಪಿ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜುಗಳ ಸುಮಾರು 160ವಿದ್ಯಾರ್ಥಿಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದರು.

ಅಭಿಪ್ರಾಯ ಇಂದಿನ ಬದಲಾಗುತ್ತಿರುವ ಸಮಾಜದಲ್ಲಿ ಎಲ್ಲ ವಿಭಾಗ ದಲ್ಲಿಯೂ ಮಕ್ಕಳಿಗೆ ಮುಕ್ತ ಅವಕಾಶ ಇರುವುದರಿಂದ ಕೇವಲ ಇಂಜಿನಿಯರ್, ಡಾಕ್ಟರ್ ಮಾತ್ರವಲ್ಲದೆ ಕ್ರೀಡೆಗೂ ಈ ದೇಶದಲ್ಲಿ ಸಮನ ಅವಕಾಶ ಸಿಗುತ್ತಿದೆ ಇದನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಳ್ಳಬೇಕು. ಗ್ರಾಮೀಣ ಭಾಗದ ಜನತಾ ಪದವಿ ಪೂರ್ವ ಕಾಲೇಜು ಶಿಕ್ಷಣ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕ್ರೀಡಾ ಕ್ಷೇತ್ರದಲ್ಲೂ ಸಂಚಲನ ಉಂಟು ಮಾಡಿದೆ. ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ ಹೇಳಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!