BlogCulturalEconomyEducationEntertainmentFashionHighlightsHuman storiesLifestyleLocal newsSportsSuccess storiesTop StoriesTrendingWomen Care

ಕುಂದಾಪುರ: ತಾಲ್ಲೂಕು ಮಟ್ಟದ ತ್ರೋಬಾಲ್ – ಜನತಾ ಪಿಯು ಬಾಲಕಿಯರು ಪ್ರಥಮ, ಬಾಲಕರು ದ್ವಿತೀಯ 

Aware others:

ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಇಲ್ಲಿನ ಆರ್. ಎನ್ ಶೆಟ್ಟಿ ಪಿಯು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾದ ಪದವಿಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ತಾಲ್ಲೂಕು ಮಟ್ಟದ ತ್ರೋಬಾಲ್

ಸ್ಪರ್ಧೆಯಲ್ಲಿ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ. 

ಬಾಲಕಿಯರ ತಂಡದಲ್ಲಿ ವಿದ್ಯಾರ್ಥಿಗಳಾದ ಸಾನ್ವಿ, ರಿತಿಷಾ,  ಅನಘಾ, ಗ್ರೀಷ್ಮಾ, ಧೃತಿ , ಐಶು, ಭೂಮಿಕಾ, ದೀಕ್ಷಾ, ಅನಘಾ, ಸಿಂಚನಾ, ನಿಶ್ಮಿತಾ ಆಟವಾಡಿದ್ದರು. ಬಾಲಕರ ತಂಡದಲ್ಲಿ ವಿದ್ಯಾರ್ಥಿಗಳಾದ ಮೌನೇಶ್, ಯೋಗೀಶ್, ಪ್ರಜ್ವನ್ ಆಡಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ, ಬೋಧಕೇತರ ವೃಂದ ಅಭಿನಂದಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!