BlogCulturalEconomyEducationEntertainmentFashionHighlightsHuman storiesLifestyleLocal newsOthersSportsTop StoriesTrending

ವಿದ್ಯಾರಣ್ಯ: ಕ್ರೀಡೆಯಿಂದ ದೈಹಿಕ ಕ್ಷಮತೆ ಸಾಧ್ಯ – ಥ್ರೋಬಾಲ್ ಪಂದ್ಯಾಟ ಉದ್ಘಾಟಿಸಿ ಸೀತಾನದಿ ವಿಠಲ ಶೆಟ್ಟಿ ಅಭಿಮತ

Aware others:

ಕುಂದಾಪುರ: ಕ್ರೀಡೆಯು ದೈಹಿಕ ಕ್ಷಮತೆ ಕಾಪಾಡಿಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ. ಇದು ಜೀವನದಲ್ಲಿ ಶಿಸ್ತು ತರುತ್ತದೆ. ಕ್ರೀಡೆಯಲ್ಲಿ ಭಾಗವಹಿಸುವಿಕೆಯೇ ಎಲ್ಲಕ್ಕಿಂತ ಮುಖ್ಯವಾದದ್ದು ಎಂದು ನಿವೃತ್ತ ದೈಹಿಕ ಶಿಕ್ಷಣಾಧಿಕಾರಿ,  ಸೌಖ್ಯ ಯೋಗ ಟ್ರಸ್ಟ್ ಹೆಬ್ರಿಯ ಅಧ್ಯಕ್ಷ ಸೀತಾನದಿ ವಿಠಲ ಶೆಟ್ಟಿ ಹೇಳಿದರು.

ಅವರು ಕರ್ನಾಟಕ ಸರ್ಕಾರ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕುಂದಾಪುರ  ಹಾಗೂ ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆ  ಯಡಾಡಿ-ಮತ್ಯಾಡಿ ಕುಂದಾಪುರ ಇವರ ಆಶ್ರಯದಲ್ಲಿ ಸೋಮವಾರ ಬಿದ್ಕಲ್ಕಟ್ಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಕ್ರೀಡಾಂಗಣದಲ್ಲಿ ನಡೆದ ಕುಂದಾಪುರ ವಲಯ ಮಟ್ಟದ 17ರ ವಯೋಮಾನದ ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟವನ್ನು ಉದ್ಘಾಟಿಸಿ ಮಾತನಾಡಿದರು.

ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ ಮಾತನಾಡಿ, ಪ್ರತಿಯೊಬ್ಬರು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು. ಕ್ರೀಡೆಯಲ್ಲಿನ ಸೋಲು-ಗೆಲುವನ್ನು ವೈಯಕ್ತಿಕವಾಗಿ ತೆಗೆದುಕೊಳ್ಳಬಾರದು. ಕ್ರೀಡೆಯಲ್ಲಿ ಭಾಗವಹಿಸುವುದೇ ಯಶಸ್ಸಿನ ಮೆಟ್ಟಿಲು ಹತ್ತಲು ದಾರಿ ಮಾಡಿಕೊಡುತ್ತದೆ ಎಂದರು.

ಸುಜ್ಞಾನ ಸಂಸ್ಥೆಯ ಖಜಾಂಚಿ ಭರತ್ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಚೇರಿ ಕುಂದಾಪುರದ  ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಸತ್ಯನಾರಾಯಣ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ಉಪಪ್ರಾಂಶುಪಾಲ ಕರುಣಾಕಾರ ಶೆಟ್ಟಿ, ಕರ್ನಾಟಕ ಪಬ್ಲಿಕ್ ಸ್ಕೂಲ್ ಬಿದ್ಕಲ್ ಕಟ್ಟೆಯ ಪ್ರಾಂಶುಪಾಲ ವಿಘ್ನೇಶ್ವರ ಭಟ್, ಹಾಲಾಡಿ ವೃತ್ತದ ಶಿಕ್ಷಣ ಸಂಯೋಜಕರು, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕುಸುಮಾಕರ್ ಶೆಟ್ಟಿ, ದೈಹಿಕ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿಶನ್ ರಾಜ್ ಶೆಟ್ಟಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಜಿಲ್ಲಾ ಉಪಾಧ್ಯಕ್ಷ ಶರತ್ ಕುಮಾರ್ ಕೆ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಉದಯ್ ಮಡಿವಾಳ್ ಅವರು ಉಪಸ್ಥಿತರಿದ್ದರು. ರತ್ನಾಕರ್ ನಾಯ್ಕ್ ನಿರೂಪಿಸಿದರು. ವಿದ್ಯಾರಣ್ಯ ಆಂಗ್ಲಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯ ಪ್ರದೀಪ್ ಕೆ. ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಂದಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!