ಬ್ರಹ್ಮಾವರ: ಬಿಸಿಎ ವಿದ್ಯಾರ್ಥಿನಿ ನಾಪತ್ತೆ
ಬ್ರಹ್ಮಾವರ: ಇಲ್ಲಿನ ವಿದ್ಯಾಲಕ್ಷ್ಮೀ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ ನ ಬಿಸಿಎ ವಿದ್ಯಾರ್ಥಿನಿ ಸ್ಪೂರ್ತಿ ಎಸ್ ಪೂಜಾರಿ ಎಂಬಾಕೆ ಸೋಮವಾರ ಬೆಳಿಗ್ಗೆ ನಾಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.

ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಬಿಸಿಎ ವಿದ್ಯಾಭ್ಯಾಸ ಮಾಡುತ್ತಿದ್ದಳು. ಹಾಸ್ಟೆಲ್ ನಲ್ಲಿ ವಾಸ್ತವ್ಯವಿರುವ ಸ್ಪೂರ್ತಿ ಹಿರೇಮಠ ಸೆಪ್ಟಂಬರ್ 15ರ ಬೆಳಿಗ್ಗೆ ಹಾಸ್ಟೆಲ್ ನಿಂದ ಕಾಲೇಜಿಗೆ ಹೊರಟಿದ್ದಳು. ಆದರೆ ಕಾಲೇಜಿಗೆ ಬಂದಿರಲಿಲ್ಲ. ಈ ಬಗ್ಗೆ ವಿಚಾರಿಸಿದಾಗ ನಾಪತ್ತೆ ಪ್ರಕರಣ ಬೆಳಕಿಗೆ ಬಂದಿದೆ.

ಯಾರಿಗಾದರೂ ಮಾಹಿತಿ ಸಿಕ್ಕಲ್ಲಿ ತಕ್ಷಣ ಬ್ರಹ್ಮಾವರ ಠಾಣೆಯನ್ನು ಸಂಪರ್ಕಿಸಲು ಕೋರಲಾಗಿದೆ