ಕೋಟೇಶ್ವರ: ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನಕ್ಕೆ ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ ಬೇಟಿ


ಕುಂದಾಪುರ: ಪರಮಪೂಜ್ಯ ಶ್ರೀ ಕಾಶಿ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತ ಕಾರ್ಯಕ್ರಮ ಕೋಟೇಶ್ವರದ ಶ್ರೀ ಪಟ್ಟಾಭಿರಾಮಚಂದ್ರ ದೇವಸ್ಥಾನದಲ್ಲಿ ನಡೆಯುತ್ತಿದ್ದು, ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ ಭೇಟಿ ನೀಡಿ ಶ್ರೀ ಕಾಶಿ ಮಠಾಧೀಶ ಶ್ರೀಮತ್ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು.


ಈ ಸಂದರ್ಭದಲ್ಲಿ ಹ್ಯಾಂಗ್ಯೋ ಸಂಸ್ಥೆಯ ನಿರ್ದೇಶಕ ಪ್ರದೀಪ ಪೈ, ಸಮಾಜ ಸೇವಕ ರಂಗನಾಥ್ ಭಟ್ ಕೋಟೇಶ್ವರ, ಯುವ ಕಾಂಗ್ರೆಸ್ ಮುಖಂಡ ಕೋಡಿ ಸುನಿಲ್ ಪೂಜಾರಿ ಹಾಗೂ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಸರ್ವ ಸದಸ್ಯರು ಮತ್ತು ಚಾತುರ್ಮಾಸ ಸಮಿತಿಯ ಅಧ್ಯಕ್ಷರು ಸರ್ವ ಸದಸ್ಯರು ಸಮಾಜ ಬಾಂಧವರು ಉಪಸ್ಥಿತರಿದ್ದರು