ಉಡುಪಿ: ಸಚಿವ ಸಂತೋಷ್ ಲಾಡ್ ಗೆ ಯುವ ಕಾಂಗ್ರೆಸ್ ನಿಂದ ಸನ್ಮಾನ
ಉಡುಪಿ: ಜಿಲ್ಲೆಗೆ ಆಗಮಿಸಿದ ರಾಜ್ಯ ಕಾರ್ಮಿಕ ಸಚಿವ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರನ್ನು ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಕುಂದಾಪುರ ವಿಧಾನಸಭಾ ಕ್ಷೇತ್ರದ ನೂರಾರು ಯುವಕರು ಆತ್ಮೀಯವಾಗಿ ಸ್ವಾಗತಿಸಿ, ಉಡುಪಿ ಪ್ರವಾಸಿ ಮಂದಿರದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಲೀಗಲ್ ಸೆಲ್ ಅಧ್ಯಕ್ಷ ಸುಕುಮಾರ್ ಶೆಟ್ಟಿ, ವಡ್ಡರ್ಸೆ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಚಂದ್ರ ಶೆಟ್ಟಿ, ಯುವ ಕಾಂಗ್ರೆಸ್ ಮುಖಂಡರು ಹಾಗೂ ಶಿರಿಯಾರ ಪಂಚಾಯತ್ ಸದಸ್ಯ ಕಿರಣ್ ಶೆಟ್ಟಿ ಪಡುಮುಂಡ, ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ದೀಪಕ್ ರಾಜಾಹುಲಿ ಅವರು ಉಪಸ್ಥಿತರಿದ್ದರು.

