BlogCulturalEducationEntertainmentFashionHealthHighlightsHuman storiesLifestyleLocal newsState newsSuccess storiesTop StoriesTrendingWomen Care

ಕುಂದಾಪುರ: ಯೋಗಾಸನದಲ್ಲಿ ವಿದ್ಯಾರಣ್ಯ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ

Aware others:

ಕುಂದಾಪುರ: ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮತ್ತು ಕಾರ್ಕಳದ ರಾಜೇಶ್ವರಿ ನ್ಯಾಷನಲ್ ಸ್ಕೂಲ್ ಸಾಣೂರು ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ಮೈಸೂರು ವಿಭಾಗ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ಸಾಂಪ್ರದಾಯಿಕ (ಟ್ರಡೀಷನಲ್ ) ಯೋಗಾಸನ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಲಾಸ್ಯ ಮಧ್ಯಸ್ಥ ಪ್ರಥಮ ಸ್ಥಾನ ಗಳಿಸಿ, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

9ನೇ ತರಗತಿ ವಿದ್ಯಾರ್ಥಿನಿಯಾಗಿರುವ ಲಾಸ್ಯ, ಅರುಣ ಮಧ್ಯಸ್ಥ ಮತ್ತು ಲತಾ ಮಧ್ಯಸ್ಥ ದಂಪತಿಗಳ ಪುತ್ರಿ. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್ ವಿದ್ಯಾರ್ಥಿನಿಗೆ ಮಾರ್ಗದರ್ಶನ ನೀಡಿದ್ದರು. 

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ವಿಜೇತ ವಿದ್ಯಾರ್ಥಿನಿಯನ್ನು ಅಭಿನಂದಿಸಿದ್ದಾರೆ. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗ ಸಂತಸ ವ್ಯಕ್ತಪಡಿಸಿದೆ.


Aware others:

Leave a Reply

Your email address will not be published. Required fields are marked *

error: Content is protected !!