BlogCulturalEducationEntertainmentFashionHighlightsHuman storiesLifestyleLocal newsOthersSportsTop StoriesTrending

ಹೆಮ್ಮಾಡಿ: ಜನತಾ ಪಿಯು ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟ – ಪ್ರಥಮ

Aware others:

ಕ್ರೀಡೆಗಳ ಮೂಲಕ ಉದ್ಯೋಗ ಮೀಸಲಾತಿ ಸಾಧ್ಯ – ಸಚಿನ್ ಸುವರ್ಣ

ಕುಂದಾಪುರ: ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಇವರ ಆಶ್ರಯದಲ್ಲಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಉಡುಪಿ ಜಿಲ್ಲಾ ಮಟ್ಟದ ಪದವಿ ಪೂರ್ವ ಬಾಲಕ ಬಾಲಕಿಯರ ಕಬ್ಬಡಿ ಪಂದ್ಯಾಟ ನಡೆಯಿತು.

ಈ ಸಂದರ್ಭ ಭಾಗವಹಿಸಿದ್ದ ಪ್ರೊ ಕಬ್ಬಡಿ ಖ್ಯಾತಿಯ ಸಚಿನ್ ಸುವರ್ಣ ಕ್ರೀಡಾರ್ಥಿಗಳನ್ನು ಉದ್ಧೇಶಿಸಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕಬಡ್ಡಿಯಲ್ಲಿ ಪಾಲ್ಗೊಂಡು ಅಷ್ಟಕ್ಕೇ ಸುಮ್ಮನಾಗಬಾರದು. ಧೈರ್ಯ ಮತ್ತು ಛಲದಿಂದ ಮುನ್ನುಗ್ಗಿ ರಾಷ್ಟ್ರ ಅಂತರ್ರಾಷ್ಟ್ರೀಯ ಮಟ್ಟದಲ್ಲೂ ಹೆಸರು ಮಾಡಬೇಕು. ವಿದ್ಯಾರ್ಥಿಗಳು ಕ್ರೀಡಾ ಮೀಸಲಾತಿಯನ್ನು ಬಳಸಿಕೊಂಡು ಉದ್ಯೋಗ ಪಡೆಯುವಂತಾಗಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಜೀವನ ಕುಮಾರ್ ಶೆಟ್ಟಿ ಮಾತನಾಡಿ, ಜನತಾ ವಿದ್ಯಾ ಸಂಸ್ಥೆ ಅನೇಕ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ನೀಡುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ತನ್ನದೇ ಆದ ಹೆಜ್ಜೆ ಗುರುತು ಮೂಡಿಸಿದೆ ಎಂದರು.

ಇದೇ ಸಂದರ್ಭ ಖ್ಯಾತ ಕ್ರೀಡಾಪಟು ಸಚಿನ್ ಸುವರ್ಣರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಸುಕೇಶ್ ಕುಮಾರ್ ಶೆಟ್ಟಿ ಹೊಸ್ಮಠ, ಕುಂದಾಪುರ ತಾಲ್ಲೂಕು ಕ್ರೀಡಾ ಸಂಯೋಜಕರಾದ ರಾಮ್ ಶೆಟ್ಟಿ, ಬೈಂದೂರು ತಾಲ್ಲೂಕು  ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಜನತಾ ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಉಪನ್ಯಾಸಕ ಉಮೇಶ್ ನಾಯ್ಕ ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಪ್ರಿಯಾoಕ ವಂದಿಸಿ, ಉಪನ್ಯಾಸಕ ಅಲ್ತಾರು ನಾಗರಾಜ್ ನಿರೂಪಿಸಿದರು. 

ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾಟದ ಬಾಲಕರ ವಿಭಾಗದಲ್ಲಿ ಕುಂದಾಪುರ ತಾಲ್ಲೂಕನ್ನು ಪ್ರತಿನಿಧಿಸಿದ ಹೆಮ್ಮಾಡಿಯ ಜನತಾ ಪಿಯು ಕಾಲೇಜು ಪ್ರಥಮ ಸ್ಥಾನ ಪಡೆದರೆ, ಹೆಬ್ರಿ ತಾಲ್ಲೂಕನ್ನು ಪ್ರತಿನಿಧಿಸಿದ ಮುನಿಯಲು ಕೆ ಪಿ ಎಸ್ ಪಿಯು ದ್ವಿತೀಯ ಸ್ಥಾನ ಪಡೆದುಕೊಂಡಿತು.

ಬಾಲಕಿಯರ ವಿಭಾಗದಲ್ಲಿ ಉಡುಪಿಯ ಸರಕಾರಿ ಪಿಯು ಕಾಲೇಜು ಪ್ರಥಮ ಸ್ಥಾನ ಹಾಗೂ ಕಾರ್ಕಳದ ಎಸ್. ವಿ. ಟಿ. ಪಿಯು ಕಾಲೇಜು ದ್ವಿತೀಯ ಸ್ಥಾನ ಪಡೆದುಕೊಂಡಿತು.


Aware others:

Leave a Reply

Your email address will not be published. Required fields are marked *

error: Content is protected !!