Local newsBlogCulturalEconomyEducationEntertainmentFashionHighlightsHuman storiesLifestyleOthersState newsTop StoriesTrending

ಕುಂದಾಪುರ: ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ – 2025-26ಕ್ಕೆ ಆಹ್ವಾನ

Aware others:

ಕುಂದಾಪುರ: ಸಾಲಿಗ್ರಾಮದ ಡಾ. ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆ (ರಿ.) ಇದರ ಆಶ್ರಯದಲ್ಲಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿ ಇವರ ಸಹಭಾಗಿತ್ವದಲ್ಲಿ ರಾಜ್ಯ ಮಟ್ಟದ ಮಕ್ಕಳ ಸಾಹಿತ್ಯ ಸಮ್ಮೇಳನ – 2025-26 ಆಯೋಜಿಸಲಾಗಿದೆ ಎಂದು ಡಾ. ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆಯ ಅಧ್ಯಕ್ಷ ಪ್ರೊ. ಉಪೇಂದ್ರ ಸೋಮಯಾಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಕ್ಕಳಲ್ಲಿ ಸುಪ್ತವಾಗಿರುವ ಕನ್ನಡ ಸಾಹಿತ್ಯ ಪ್ರತಿಭೆಯನ್ನು ಗುರುತಿಸಿ, ಅವರಿಗೊಂದು ವೇದಿಕೆಯನ್ನು ಒದಗಿಸುವುದು ಈ ಸಮ್ಮೇಳನದ ಉದ್ದೇಶ. ಕನ್ನಡ ಸಾಹಿತ್ಯ ಸಮ್ಮೇಳನದ ಮಾದರಿಯಲ್ಲಿ ಜರುಗುವ ಈ ಸಮ್ಮೇಳನದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು, ರಾಜ್ಯದ ವಿವಿಧ ಭಾಗಗಳಿಂದ ಬಾಲ ಸಾಹಿತ್ಯಾಸಕ್ತರು ಭಾಗವಹಿಸಲಿದ್ದಾರೆ.

ಈ ವರ್ಷ ರಾಜ್ಯ ಮಟ್ಟದ ಸಮ್ಮೇಳನವು ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯಲ್ಲಿ ಅದ್ದೂರಿಯಾಗಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಸಮ್ಮೇಳನಾಧ್ಯಕ್ಷರು, ಉದ್ಘಾಟಕರು, ಕವನಗೋಷ್ಠಿ ಹಾಗೂ ಕಥಾಗೋಷ್ಠಿಯ ಅಧ್ಯಕ್ಷರು, ನಿರೂಪಕರು, ಸ್ವಾಗತ ಹಾಗೂ ವಂದನಾರ್ಪಣಾಕಾರರು ಈ ಎಲ್ಲವನ್ನೂ ವಿದ್ಯಾರ್ಥಿಗಳೇ ನಿರ್ವಹಿಸಬೆಕಾಗಿರುವುದು ವಿಶಿಷ್ಟ ವೈಶಿಷ್ಟ್ಯವಾಗಿದೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆ ನವೆಂಬರ್ 9, 2025ರಂದು (ರವಿವಾರ) ಕೋಟಾದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಹಳೆಯ ಕಟ್ಟಡ) ಪಾರದರ್ಶಕವಾಗಿ ನಡೆಯಲಿದೆ. ಆಸಕ್ತ ವಿದ್ಯಾರ್ಥಿಗಳು ತಮ್ಮ ಸ್ವರಚಿತ ಕತೆ, ಕವನ ಅಥವಾ ಪುಸ್ತಕ ವಿಮರ್ಶೆಗಳನ್ನು ಲಿಖಿತ ಹಾಗೂ ಮೌಖಿಕ ರೂಪದಲ್ಲಿ ಮಂಡಿಸಬೇಕು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಸಮ್ಮೇಳನದ ವೇದಿಕೆಯಲ್ಲಿ ತಮ್ಮ ಕೃತಿಗಳನ್ನು ಪ್ರಸ್ತುತಪಡಿಸಲು ಅವಕಾಶ ನೀಡಲಾಗುವುದು.

ಮಕ್ಕಳಲ್ಲಿ ಕನ್ನಡ ನಾಡು, ನುಡಿ ಹಾಗೂ ಸಾಹಿತ್ಯದ ಪ್ರೇಮವನ್ನು ಬೆಳೆಸುವ ಉದ್ದೇಶದಿಂದ ಆಯೋಜಿಸಿರುವ ಈ ಸಮ್ಮೇಳನದಲ್ಲಿ ಜಿಲ್ಲೆಯ ಹಾಗೂ ರಾಜ್ಯದ ಎಲ್ಲ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಲು ಪಾಲಕರು ಮತ್ತು ಶಿಕ್ಷಕರು ಪ್ರೇರೇಪಿಸಬೇಕೆಂದು ಡಾ. ಕೋಟ ಶಿವರಾಮ ಕಾರಂತ ಮಕ್ಕಳ ಸಾಹಿತ್ಯ ವೇದಿಕೆಯ ಅಧ್ಯಕ್ಷ ಪ್ರೊ. ಉಪೇಂದ್ರ ಸೋಮಯಾಜಿ ತಿಳಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!