ಅಂಪಾರು: ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ
ಕುಂದಾಪುರ: ಸಂಜಯ್ ಗಾಂಧಿ ಆಂಗ್ಲ ಮಾಧ್ಯಮ ಶಾಲೆ, ಅಂಪಾರಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳು ಕನ್ನಡ ಮತ್ತು ಕರ್ನಾಟಕದ ಸಂಸ್ಕೃತಿಯನ್ನು ಬಿಂಬಿಸುವ ಹಲವಾರು ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಕನ್ನಡ ನಾಡಗೀತೆ ಹಾಡಿದರು. ನಾಡು, ನುಡಿ, ಮತ್ತು ಸಂಸ್ಕೃತಿಯ ಮಹತ್ವವನ್ನು ಸಾರುವಂತಹ ವಾತಾವರಣವನ್ನು ಸೃಷ್ಟಿಸಿತ್ತು.
ಹೈದರಾಬಾದ್‌ನ ಹೋಟೆಲ್ ಉದ್ಯಮಿ ಶೇಖರ್ ಶೆಟ್ಟಿ ವಂಡ್ಸೆ ಅವರು ದೀಪ ಬೆಳಗುವ ಮೂಲಕ ಉದ್ಘಾಟಿಸಿ ಮಾತನಾಡಿ, ನಮ್ಮ ಬದುಕಿನಲ್ಲಿ ಕನ್ನಡ ನಾಡು ನುಡಿ ಉಸಿರಾಗಬೇಕು. ಕನ್ನಡದ ಮಣ್ಣಲ್ಲಿ ಹುಟ್ಟಿ, ಕನ್ಬಡವನ್ನೇ ಮಾತಾಡುತ್ತಾ ವಿದೇಶಕ್ಕೆ ಹೋದರೂ ತಾಯ್ನೆಲದ ಭಾಷೆ ಸೊಗಡನ್ನು ಮರೆಯದೇ ಗೌರವಿಸಬೇಕು ಎಂದರು.
ಸಂಜಯ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ ಬಲಾಡಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ನವೀನ್ ಕುಮಾರ್ ಶೆಟ್ಟಿ, ಖಜಾಂಚಿ ಕೊಡ್ಲಾಡಿ ಸುಭಾಷ್‌ಚಂದ್ರ ಶೆಟ್ಟಿ, ನಿರ್ದೇಶಕ ಉಮೇಶ್ ಕೊಠಾರಿ ಮೊದಲಾದವರು ಉಪಸ್ಥಿತರಿದ್ದರು.
ಶಾಲಾ ಆಡಳಿತಾಧಿಕಾರಿ ಚೈತ್ರಾ ಯಡಿಯಾಳ ಸ್ವಾಗತಿಸಿದರು. ವಂದಿಸಿ ಕಾರ್ಯಕ್ರಮ ನಿರೂಪಿಸಿದರು
