ಜಾಲತಾಣದಲ್ಲಿ ಛಾಯಾಗ್ರಾಹಕರಿಗೆ ಅವಹೇಳನ – ಫೋಟೋಗ್ರಾಫರ್ಸ್ ಅಸೋಸಿಯೇಷನ್ ನಿಂದ ಪೊಲೀಸ್ ದೂರು

ಕುಂದಾಪುರ: ಸಾಮಾಜಿಕ ಜಾಲತಾಣದಲ್ಲಿ ಛಾಯಾಗ್ರಾಹಕರಿಗೆ ಅವಹೇಳನಕಾರಿ ಬರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ರೂರಿನ ದಿವಾಕರ ಶೆಟ್ಟಿ ಎಂಬುವರ ವಿರುದ್ಧ ಕುಂದಾಪುರ ತಾಲೂಕು ಛಾಯಾಗ್ರಾಹಕರ ಸಂಘ ಆಕ್ರೋಶ ಹೊರಹಾಕಿದೆ ಅಲ್ಲದೆ ಈ ಬಗ್ಗೆ ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ತಪ್ಪಿತಸ್ಥನ ವಿರುದ್ಧ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದರು.


ಬಳಿಕ ಕುಂದಾಪುರ ತಾಲೂಕು ಫೋಟೋಗ್ರಾಫರ್ಸ್ ಅಸೋಸಿಯೇಷನ್ ಸಲಹಾ ಸಮಿತಿ ಅಧ್ಯಕ್ಷ ನಾಗರಾಜ ರಾಯಪ್ಪನಮಠ ಅವರು ಮಾತನಾಡಿ ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಛಾಯಾಗ್ರಾಹಕರಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಬರೆಯಲಾಗಿದೆ. ಇದರಿಂದ ಛಾಯಾಗ್ರಾಹಕರಿಗೆ ನೋವಾಗಿದ್ದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಛಾಯಾಗ್ರಾಹಕರ ಬಗ್ಗೆ ಅವಹೇಳನಕಾರಿ ಬರವಣಿಗೆ ಖಂಡನೀಯ. ಈ ಬಗ್ಗೆ ಜಿಲ್ಲೆಯಾದ್ಯಂತ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸುವಂತೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಜಿಲ್ಲಾಧ್ಯಕ್ಷರಿಗೆ ಮನವಿ ಮಾಡಲಾಗುವುದು ಎಂದರು.


ಸುಮಾರು ಐವತ್ತಕ್ಕೂ ಹೆಚ್ಚು ಛಾಯಾಗ್ರಾಹಕರು ಕುಂದಾಪುರ ಪೊಲೀಸ್ ಠಾಣೆಗೆ ಬಂದು ವೃತ್ತ ನಿರೀಕ್ಷಕ ಜಯರಾಮ ಡಿ ಗೌಡ ಅವರಿಗೆ ಮನವಿ ನೀಡಿದರು ಬಳಿಕ ಠಾಣೆಯಲ್ಲಿ ಪ್ರಕರಣ ದಾಖಲಿಸುವಂತೆ ದೂರು ನೀಡಿದರು. ಫೇಸ್ಬುಕ್ ವಿಡಿಯೋ ನೋಡಲು ಇಲ್ಲಿ ಕ್ಲಿಕ್ಕಿಸಿ 👇
