ವಿದ್ಯಾನಗರ: ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ಅನ್ಫರ್ಲ್ ಡ್ರೀಮ್ಸ್
ಕುಂದಾಪುರ: ಸಿದ್ದಾಪುರದ ವಿದ್ಯಾನಗರದಲ್ಲಿರುವ ಜ್ಞಾನಸರಸ್ವತಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶೈಕ್ಷಣಿಕ ಹಾಗೂ ಮಾನಸಿಕವಾಗಿ ಎದುರಿಸಬೇಕಾದ ಪೂರ್ವ ತಯಾರಿ ತರಬೇತಿ ಕಾರ್ಯಾಗಾರ “ಅನ್ಫರ್ಲ್ ಡ್ರೀಮ್ಸ್ ವಿಶೇಷ ಕಾರ್ಯಕ್ರಮ” ನಡೆಯಿತು.

ಖ್ಯಾತ ವೃತ್ತಿ ಶಿಕ್ಷಣ ಮಾರ್ಗದರ್ಶಕ ಹಾಗೂ ಆಪ್ತ ಸಮಾಲೋಚಕ ಎನ್.ಜಿ. ಸ್ವಾಮಿ ವಿಶೇಷ ಉಪನ್ಯಾಸ ನೀಡಿ, ವಿದ್ಯಾರ್ಥಿಗಳ ಸುಪ್ತ ಚೇತನ ವನ್ನು ಜಾಗೃತ ಗೊಳಿಸುವ ಮಾತುಗಳನ್ನಾಡಿದ ಅವರು ತಮ್ಮ ಹಣೆಬರಹಗಳನ್ನು ಶಿಕ್ಷಣದ ಮೂಲಕ ತಿದ್ದಿಕೊಳ್ಳುವ ಸದಾವಕಾಶ ನಿಮಗಿದೆ. ಅದಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಹೇ್ಎ ಎದುರಿಸಬೇಕು ಎಂಬುದನ್ನು ಮನದಟ್ಟು ಮಾಡಿದರು.
ಸುಮುಖ ಎಜ್ಯುಕೇಶನಲ್ ಟ್ರಸ್ಟ್ ನ ಅಧ್ಯಕ್ಷ ಬಿ.ಎಸ್.ಸುರೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಪ್ರಾಸ್ತಾವಿಸಿ, ವಿದ್ಯಾರ್ಥಿಗಳು ಭವಿಷ್ಯದ ಕನಸನ್ನು ನನಸಾಗಿಸಿಕೊಳ್ಳುವಲ್ಲಿ ನಿರಂತರ ಪರಿಶ್ರಮದ ಅಗತ್ಯವಿದೆ ಎಂದರು.
ಸುಮುಖ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಯು. ಪಾಂಡುರಂಗ ಪಡಿಯಾರ್, ಶಿಕ್ಷಕ ಉಮೇಶ್, ಪ್ರಾಂಶುಪಾಲ ಅಮರೇಶ್ ಹೆಗ್ಡೆ, ಉಪಪ್ರಾಂಶುಪಾಲ ಹರ್ಷ ಶೆಟ್ಟಿ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕ ಉಪನ್ಯಾಸಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕನ್ನಡ ಉಪನ್ಯಾಸಕ ನಾಗರಾಜ್ ಗುಳ್ಳಾಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
