BlogCulturalEducationEntertainmentFashionHighlightsHuman storiesLifestyleLocal newsOthersState newsTop StoriesTrendingWomen Care

ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2025ಕ್ಕೆ ರಾಜ್ಯದ ಮೂವರು ಹಿರಿಯ ಸಾಹಿತಿಗಳು ಆಯ್ಕೆ

Aware others:

ಉಡುಪಿ: ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ಹಾಗೂ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ವತಿಯಿಂದ   ಪ್ರದಾನ ಮಾಡಲಾಗುವ ಸಾಹಿತಿ ಮೇಟಿ ಮುದಿಯಪ್ಪ ನೆನಪಿನ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2025ಕ್ಕೆ ‘ ರಾಜ್ಯದ ಮೂವರು ಹಿರಿಯ  ಸಾಹಿತಿಗಳಾದ ಧಾರವಾಡದ ಚನ್ನಪ್ಪ ಅಂಗಡಿ ( ಸಮಗ್ರ ಸಾಹಿತ್ಯ), ಉಡುಪಿಯ  ಡಾ.ನಿಕೇತನ (ಸಂಶೋಧನೆ ವಿಮರ್ಶೆ), ಬೆಂಗಳೂರಿನ ಮುದಲ್ ವಿಜಯ್ (ಕಾವ್ಯ )ಆಯ್ಕೆಯಾಗಿದ್ದಾರೆ.

ನವೆಂಬರ್ 22ರಂದು ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ನಡೆಯುವ  ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ  ಪ್ರಶಸ್ತಿ ಪತ್ರ, ಫಲಕ ಹಾಗೂ ಬೆಳ್ಳಿ ಪದಕ, ನಗದು 5,000ದೊಂದಿಗೆ ‘ಮಲಬಾರ್ ವಿಶ್ವಸಾಹಿತ್ಯ ಪುರಸ್ಕಾರ 2025’ ಪ್ರದಾನ ಮಾಡಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!