BlogCulturalEconomyEducationEntertainmentFashionHighlightsHuman storiesLifestyleLocal newsOthersSportsSuccess storiesTop StoriesTrending

ಕುಂದಾಪುರ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಣ್ಯದ ವಿದ್ಯಾರ್ಥಿ ಸೂರ್ಯಪ್ರಕಾಶ್ ಗೆ ಎರಡು ಚಿನ್ನದ ಪದಕ

Aware others:

ಕುಂದಾಪುರ: ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಕಚೇರಿ ಮತ್ತು ವಕ್ವಾಡಿ ಸರ್ಕಾರಿ ಪ್ರೌಢಶಾಲೆ ಆಶ್ರಯದಲ್ಲಿ ನಡೆದ ಕುಂದಾಪುರ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ವಿದ್ಯಾರಣ್ಯ ಶಾಲೆಯ ವಿದ್ಯಾರ್ಥಿ ಸೂರ್ಯಪ್ರಕಾಶ್ ಪ್ರಥಮ ಸ್ಥಾನ ಗಳಿಸಿ ಎರಡು ಚಿನ್ನದ ಪದಕದೊಂದಿಗೆ ಉಡುಪಿ ಜಿಲ್ಲಾ ಮಟ್ಟಕ್ಕೆ  ಆಯ್ಕೆಯಾಗಿದ್ದಾನೆ.

17ರ ವಯೋಮಾನದ ಬಾಲಕರ ಗುಂಡು ಎಸೆತ ಮತ್ತು ಜಾವೆಲಿನ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ಸೂರ್ಯ ಪ್ರಕಾಶ್ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿ. ಸೂರ್ಯಪ್ರಕಾಶ್ ಕಟ್ಕೇರಿ ಭಾಸ್ಕರ ರಾಮ ಗಾಣಿಗ ಮತ್ತು ವಿಜಯಲಕ್ಷ್ಮಿ ದಂಪತಿಯ ಪುತ್ರ.

ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ  ಭರತ್ ಶೆಟ್ಟಿ, ಸಂಸ್ಥೆಯ ಮುಖ್ಯೋಪಾಧ್ಯಾಯ ಪ್ರದೀಪ್. ಕೆ ಅಭಿನಂದಿಸಿದ್ದಾರೆ. ದೈಹಿಕ ಶಿಕ್ಷಣ ಶಿಕ್ಷಕ ಸೂರ್ಯ ಮತ್ತು ಕುಮಾರಿ ಕಾವ್ಯ ಶೆಟ್ಟಿ ತಂಡದ ಸಂಯೋಜನೆಯಲ್ಲಿ  ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ್ ಕುಮಾರ್  ಮಾರ್ಗದರ್ಶನ ನೀಡಿದ್ದಾರೆ. ಸುಜ್ಞಾನ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಬೋಧಕ ಬೋಧಕೇತರ ವರ್ಗದವರು ಸಂತಸ ವ್ಯಕ್ತಪಡಿಸಿದ್ದಾರೆ.


Aware others:

Leave a Reply

Your email address will not be published. Required fields are marked *

error: Content is protected !!