ಕೋಟದಲ್ಲಿ ವೋಟ್ ಚೋರ್ ಗದ್ದಿ ಚೋಡ್ – ಕಾಂಗ್ರೆಸ್ ನಿಂದ ಸಹಿ ಸಂಗ್ರಹ ಅಭಿಯಾನ

ಕುಂದಾಪುರ: ದೇಶದಲ್ಲಿ ನಡೆಯುತ್ತಿರುವ ಮತಗಳ್ಳತನದ ವಿರುದ್ಧ ಕೇಂದ್ರ ಸರ್ಕಾರದ ಪ್ರತಿಪಕ್ಷ ನಾಯಕ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ಹಮ್ಮಿಕೊಂಡಿರುವ ” ವೋಟ್ ಚೋರ್ ಗದ್ದಿ ಚೋಡ್ ” ಸಹಿ ಸಂಗ್ರಹ ಅಭಿಯಾನದ ಪ್ರಯುಕ್ತ ಕೋಟ ಬ್ಲಾಕ್ ಕಾಂಗ್ರೆಸ್ ಸಮಿತಿ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಮೂಡಹೋಳಿ ಒಂದನೇ ಬೂತಿನಲ್ಲಿ ಮನೆ ಮನೆಗೆ ತೆರಳಿ ಸಹಿ ಸಂಗ್ರಹ ಅಭಿಯಾನ ಮಾಡಲಾಯಿತು. ಈ ಸಂದರ್ಭ ದೇಶದಲ್ಲಿ ಬಿಜೆಪಿಯಿಂದ ಆಗುತ್ತಿರುವ ಕಳ್ಳ ಮತದಾನ ಆಗುತ್ತಿರುವ ಬಗ್ಗೆ ಅರಿವು ಮೂಡಿಸಲಾಯಿತು.

ಸಾಲಿಗ್ರಾಮ ಪಟ್ಟಣ ಪಂಚಾಯತ್ ನ ಮಾಜಿ ಸದಸ್ಯ ಅಚ್ಚುತ್ ಪೂಜಾರಿ, ಶ್ರೀ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ, ವಕೀಲ ಗಣೇಶ್ ಕೆ ನೆಲ್ಲಿಬೆಟ್ಟು, ಕೋಟ ವ್ಯವಸಾಯಕ ಬ್ಯಾಂಕ್ ನ ಸದಸ್ಯ ಪಿ. ಶೇಖರ್ ಮರಕಾಲ, ಕುಂದಾಪುರ ವಿಧಾನಸಭಾ ಸಭಾ ಕ್ಷೇತ್ರದ ಅಕ್ರಮ ಸಕ್ರಮ ಸದಸ್ಯ ರಾಜೇಶ್ ಕೆ ನೆಲ್ಲಿಬೆಟ್ಟು, ಸ್ಥಳೀಯ ಪ್ರಮುಖ ಕಾಂಗ್ರೆಸ್ ಮುಖಂಡರಾದ ರಮೇಶ್ ಪೂಜಾರಿ ಮೂಡಹೋಳಿ, ನಾಗೇಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
