BlogCulturalEconomyEducationEntertainmentHighlightsLocal newsSportsTop StoriesTrending

ದೈಹಿಕ, ಮಾನಸಿಕ ಸ್ವಾಸ್ಥ್ಯಕ್ಕೆ ಕ್ರೀಡೆ ಪೂರಕ – ರವಿ ಶಂಕರ್ ಹೆಗ್ಡೆ

Aware others:

ಹೆಮ್ಮಾಡಿಯ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ಖೇಲೋ ಜನತಾ

ಕುಂದಾಪುರ: ದೈಹಿಕ ಹಾಗೂ  ಮಾನಸಿಕ ಸ್ವಾಸ್ಥ ಕಾಪಾಡಿಕೊಳ್ಳುವಲ್ಲಿ ಕ್ರೀಡೆ ಸಹಕಾರಿ ಎಂದು ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ರವಿ ಶಂಕರ್ ಹೆಗ್ಡೆ ಹೇಳಿದರು. ಅವರು ಶನಿವಾರ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟ ಖೋಲೋ ಜನತಾ ಕಾರ್ಯಕ್ರಮದ ಧ್ವಜಾರೋಹಣಗೈದು ಶುಭ ಹಾರೈಸಿದರು.

 ಮೊರಾರ್ಜಿ ದೇಸಾಯಿ ವಸತಿ ಶಾಲೆ  ಹೆರಂಜಾಲು ಇಲ್ಲಿಯ ಪ್ರಾಂಶುಪಾಲೆ ಕಮಲಾ ಕೆ. ವಿ ಮಾತನಾಡಿ, ಕ್ರೀಡಾ ಉತ್ಸವ ನಮ್ಮ ಜೀವನಕ್ಕೆ ಜೀವನೋತ್ಸಾಹ ತಂದು ಕೊಡುತ್ತದೆ.ಎಲ್ಲ ರಂಗದಲ್ಲೂ ಸಿಕ್ಕಿರುವ ಅವಕಾಶ ಉಪಯೋಗಿಸಿಕೊಳ್ಳಿ ಆ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದರು.

ಜನತಾ ಪಿಯು ಕಾಲೇಜಿನ ಪ್ರಾಂಶುಪಾಲ ಗಣೇಶ್ ಮೊಗವೀರ ಮಾತನಾಡಿ, ನಮ್ಮ ಕಾಲೇಜಿನ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆ ಜೊತೆಯಲ್ಲಿ ಕ್ರೀಡೆಗೂ ಅವಕಾಶ ಮಾಡಿಕೊಟ್ಟಿದ್ದೇವೆ. ಕ್ರೀಡೆಯಲ್ಲಿ ರಾಜ್ಯ ರಾಷ್ಟ್ರ ಮಟ್ಟದಲ್ಲಿ ನಮ್ಮ ವಿದ್ಯಾರ್ಥಿಗಳು ಸಾಧನೆ ಮಾಡಿರುವುದು ಹೆಮ್ಮೆಯ ಸಂಗತಿ ಎಂದರು.

ಜನತಾ ಪ್ರೌಢ ಶಾಲೆಯ ಶಿಕ್ಷಕರಾದ ವಿಠ್ಠಲ್ ನಾಯಕ್, ಕಾಲೇಜಿನ ಉಪ ಪ್ರಾoಶುಪಾಲ ರಮೇಶ್ ಪೂಜಾರಿ, ಉಪಸ್ಥಿತರಿದ್ದರು. ಉಪನ್ಯಾಸಕ ಅಲ್ತಾರು ನಾಗರಾಜ್ ಸ್ವಾಗತಿಸಿ, ಅಭಿಜಿತ್ ವಂದಿಸಿದರು. ಉದಯ ನಾಯ್ಕ ನಿರೂಪಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!