ಸ್ಪರ್ಧಾತ್ಮಕ ಮನೋಭಾವದಿಂದ ಪ್ರಗತಿ ಸಾಧ್ಯ – ಚಂದ್ರಶೇಖರ ಶೆಟ್ಟಿ
ಕುಂದಾಪುರ: ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ಹೇಳಿದರು. ಅವರು ಕುಮದಾಪುರದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟದಲ್ಲಿ ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸಿ ಮಾತನಾಡಿದರು.

ಸಂಸ್ಥೆಯ ಕಾರ್ಯದರ್ಶಿ ಕೆ. ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲ ಸಂದೀಪ್ ಗಾಣಿಗ, ಉಪಪ್ರಾಂಶುಪಾಲ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿ’ಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿ’ಸೋಜಾರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿಯರಾದ ಫಾತಿಮಾ ಶೀಝಾ ಕಾರ್ಯಕ್ರಮ ನಿರೂಪಿಸಿ, ಕನ್ವಿತಾ ಸ್ವಾಗತಿಸಿದರ. ಮಹಾಲಸಾ ಶ್ಯಾನುಭಾಗ್ ವಂದಿಸಿದರು.
ಈ ಸಂದರ್ಭ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಭಾಗವಹಿಸಿದ್ದರು. ಮಕ್ಕಳು ನಡೆಸಿದ ದೈಹಿಕ ಕಸರತ್ತು ಮನಸೂರೆಗೊಂಡಿತು.
