Blog

ಗ್ರಾಮಾಭಿವೃದ್ಧಿ ಯೋಜನೆಗಳು ಸಂಘಟಿತ ಸಮಾಜದ ಶಕ್ತಿಯಾಗುತ್ತವೆ : ಸಂಸದ ಕೋಟ

Aware others:

ಕೋಟ :ಗ್ರಾಮಾಭಿವೃದ್ಧಿ ಯೋಜನೆಗಳಿಂದ ಅಭಿವೃದ್ಧಿಯ ಜೊತೆಗೆ ಸಂಘಟಿತ ಸಮಾಜ ಬೆಳೆಯುತ್ತದೆ. ಮಹಿಳಾ ಸಶಕ್ತತೆಗೆ ಸ್ವ ಸಹಾಯ ಸಂಘಗಳು ಶಕ್ತಿ ತುಂಬುತ್ತಿವೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಭಾನುವಾರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಾಂಡೇಶ್ವರ ವಲಯದ ವತಿಯಿಂದ ಸಾಲಿಗ್ರಾಮ ಚೇಂಪಿಯ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ನಡೆದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಬ್ರಹ್ಮಾವರ ತಾಲ್ಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್‌ನ ಅಧ್ಯಕ್ಷ  ಪ್ರಕಾಶ ಶೆಟ್ಟಿ ಮಾತನಾಡಿ, ಗ್ರಾಮಾಭಿವೃದ್ಧಿ ಯೋಜನೆ ಸಮಾಜದ ಒಳಿತಿಗಾಗಿರುವ ಕಲ್ಪವೃಕ್ಷವಾಗಿದೆ. ಮಧ್ಯವರ್ಜನ, ಸ್ವಾಸ್ತ್ಯ ಸಂಕಲ್ಪ ಶಿಬಿರಗಳು ಉತ್ತಮ ಸಮಾಜವನ್ನು ನಿರ್ಮಿಸುತ್ತಿದೆ. ಯೋಜನೆ ನಾಯಕತ್ವ ಗುಣಗಳನ್ನು ಬೆಳೆಸಿದೆ ಎಂದರು.

ಪಾಂಡೇಶ್ವರ ವಲಯ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷೆ ರಾಧಾ ಎಸ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು.

ಬಾರ್ಕೂರು ಕೂಡ್ಲಿ ದೇವಸ್ಥಾನದ ಶ್ರೀನಿವಾಸ ಉಡುಪ, ಸಾಸ್ತಾನ ಪಾಂಡೇಶ್ವರ ರಕ್ತೇಶ್ವರಿ ದೇವಸ್ಥಾನದ ಧರ್ಮದರ್ಶಿ ರಮೇಶ ರಾವ್, ಉಡುಪಿ ತಾಲ್ಲೂಕು ಜನಜಾಗೃತಿ ವೇದಿಕೆ ಟ್ರಸ್ಟ್‌ನ ನಿಕಟಪೂರ್ವ ಅಧ್ಯಕ್ಷ ಅಚ್ಚುತ ಪೂಜಾರಿ, ಅಧ್ಯಕ್ಷ ಪ್ರತಾಪ್ ಶೆಟ್ಟಿ, ಸಾಲಿಗ್ರಾಮ ಚೇಂಪಿಯ ವಿಶ್ವಜ್ಯೋತಿ ಮಹಿಳಾ ಬಳಗದ ಅಧ್ಯಕ್ಷೆ ರಮ್ಯಾ ರಮೇಶ ಆಚಾರ್ಯ, ಕೋಟ ವಿರಾಡಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ  ಸುಬ್ರಾಯ ಆಚಾರ್ಯ, ಶೌರ್ಯ ಟೀಮ್‌ನ ಕಾಳಿಂಗ ಪೂಜಾರಿ, ಯೋಜನೆಯ ಬ್ರಹ್ಮಾವರ ತಾಲ್ಲೂಕಿನ ಮೇಲ್ವಿಚಾರಕ ರಮೇಶ ಪಿ.ಕೆ, ಗಿರಿಜ ಶೇಖರ ಪೂಜಾರಿ ಇದ್ದರು.

ಇದೇ ಸಂದರ್ಭ ಗುಂಡ್ಮಿ, ಐರೋಡಿ, ಕಾವಡಿ, ಕೋಡಿ, ಪಡುಬೈಲು, ಕಾರ್ಕಡ, ಸಾಸ್ತಾನ, ಯಡಬೆಟ್ಟು ಸಂಘಗಳ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳಿಗೆ ಪದಗ್ರಹಣ ಸಮಾರಂಭ ನಡೆಯಿತು. ಆಯ್ದ ಫಲಾನುಭವಿಗೆ ಸುಜ್ಞಾನ ನಿಧಿ ವಿತರಿಸಲಾಯಿತು. ಪಾಂಡೇಶ್ವರ ವಲಯದ ಶೌರ್ಯ ತಂಡದವರನ್ನು ಗುರುತಿಸಲಾಯಿತು. ಯೋಜನೆಯ ಕೃಷಿ ಅಧಿಕಾರಿ ರಾಘವೇಂದ್ರ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಜಯಲಕ್ಷ್ಮೀ ವರದಿ ವಾಚಿಸಿದರು. ಸೇವಾ ಪ್ರತಿನಿಧಿ ಶೋಭಾ ವಂದಿಸಿದರು. ಸುಜಾತ ಬಾಯರಿ ಕಾರ್ಯಕ್ರಮ ನಿರೂಪಿಸಿದರು.


Aware others:

Leave a Reply

Your email address will not be published. Required fields are marked *

error: Content is protected !!