BlogCulturalEconomyEducationEntertainmentFashionHighlightsHuman storiesLifestyleLocal newsOthersTechTop StoriesTrending

ಸುಜ್ಞಾನ ಪಿಯು  ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Aware others:

ಕುಂದಾಪುರ: ಸುಜ್ಞಾನ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಕಾರ್ಯಕ್ರಮದ ಭಾಗವಾಗಿ ವಂಡಾರಿನ ‘ಕೃಷ್ಣ ಪ್ರಸಾದ್ ಕ್ಯಾಶ್ಯೂಸ್ ಪ್ರೈವೇಟ್ ಲಿಮಿಟೆಡ್’ ಕೈಗಾರಿಕಾ ಘಟಕಕ್ಕೆ ಭೇಟಿ ನೀಡಿದರು. ವಿದ್ಯಾರ್ಥಿಗಳಿಗೆ ಕೈಗಾರಿಕಾ ಕಾರ್ಯಾಚರಣೆಗಳ ಬಗ್ಗೆ ಪ್ರಾಯೋಗಿಕ ಜ್ಞಾನವನ್ನು ನೀಡುವ ಉದ್ದೇಶದಿಂದ ಈ ಭೇಟಿಯನ್ನು ಆಯೋಜಿಸಲಾಗಿತ್ತು.

ಭೇಟಿಯ ಸಂದರ್ಭದಲ್ಲಿ, ವಿದ್ಯಾರ್ಥಿಗಳಿಗೆ ಗೋಡಂಬಿ ಸಂಸ್ಕರಣೆಯ ಸಂಪೂರ್ಣ ಹಂತಗಳ ಬಗ್ಗೆ ವಿವರವಾದ ಮಾಹಿತಿಯನ್ನು ನೀಡಲಾಯಿತು. ಕಾರ್ಖಾನೆಯ ಅಧಿಕಾರಿಗಳು ಅಲ್ಲಿನ ವಿವಿಧ ಯಂತ್ರೋಪಕರಣಗಳ ಕಾರ್ಯವೈಖರಿ, ಗುಣಮಟ್ಟ ನಿಯಂತ್ರಣ ವ್ಯವಸ್ಥೆ ಮತ್ತು ಒಟ್ಟಾರೆ ಉತ್ಪಾದನಾ ಪ್ರಕ್ರಿಯೆಯ ಬಗ್ಗೆ ವಿವರಿಸಿದರು. 

ಈ ಸಂದರ್ಭ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಸಂಪತ್ ಶೆಟ್ಟಿ ಅವರು ಮಾತನಾಡಿ, ವೃತ್ತಿಜೀವನದ ಅವಕಾಶಗಳು, ವೃತ್ತಿಪರ ಬೆಳವಣಿಗೆ ಹಾಗೂ ಜೀವನದಲ್ಲಿ ಶಿಸ್ತು ಮತ್ತು ಸಮರ್ಪಣಾ ಭಾವದ ಮಹತ್ವದ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ನೀಡಿ ಪ್ರೇರೇಪಿಸಿದರು.

ಈ ಸಂದರ್ಭದಲ್ಲಿ ಸುಜ್ಞಾನ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರಮತ್ ಶೆಟ್ಟಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು.


Aware others:

Leave a Reply

Your email address will not be published. Required fields are marked *

error: Content is protected !!